ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರ ಬಂಧನ
1 min read
ತುಮಕೂರು ಜಿಲ್ಲೆಯ ಮಾರನಾಯಕನಪಾಳ್ಯ ಗ್ರಾಮದಲ್ಲಿ ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಶಕ್ ದಾವು ಮತ್ತು ದುಬಾ ಕಪಟ್ ಎಂದು ಗುರುತಿಸಲಾಗಿದೆ.
ಜಿಲ್ಲೆಯ ಮಾರನಾಯಕನಪಾಳ್ಯ ಗ್ರಾಮದಲ್ಲಿ ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಶಕ್ ದಾವು ಮತ್ತು ದುಬಾ ಕಪಟ್ ಎಂದು ಗುರುತಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಆರೋಪಿಗಳು ಮಾರನಾಯಕನಪಾಳ್ಯದ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ‘ಗಟ್ಟಿಮುಟ್ಟಾದ ಮತ್ತು ರುಚಿಕರ’ ಮಾಂಸಕ್ಕಾಗಿ ನವಿಲುಗಳನ್ನು ಕೊಂದಿದ್ದಾರೆ ಎನ್ನಲಾಗಿದೆ.
ಗ್ರಾಮದಲ್ಲಿ ನವಿಲುಗಳ ಮಾರಣಹೋಮ ನಡೆಸುತ್ತಿದ್ದು, ಈ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.