ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ, ಸೂಕ್ತ ತನಿಖೆಗೆ ಸೂಚಿಸಿದ್ದೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
1 min readಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೊಲೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣ ಈಗಷ್ಟೇ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೊಲೆ ಪ್ರಕರಣ ಈಗಷ್ಟೇ ಗೊತ್ತಾಗಿದ್ದು, ಅವರು ಒಬ್ಬರೇ ವಾಸವಿದ್ದರು ಎಂದು ತಿಳಿದುಬಂದಿದೆ. ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದರು.