ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ : 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ
1 min readಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.
ಬ್ಯಾಂಕಾಕ್, ಕೊಲಂಬೋ ಮತ್ತು ಮಸ್ಟಟ್ ನಿಂದ ಅಕ್ರಮವಾಗಿ ಚಿನ್ನ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ .
ಪ್ರಯಾಣಿಕರು ಶರ್ಟ್ ಮತ್ತು ಒಳ ಉಡುಪಿನಲ್ಲಿ ಚಿನ್ನದ ಕಟ್ ಫೀಸ್ ಗಳನ್ನು ಸಾಗಿಸುತ್ತಿದ್ದರು.ಒಟ್ಟು 1,26,58, 618 ರೂ. ಮೌಲ್ಯದ 2 ಕೆಜಿ 79 ಗ್ರಾಂ ತೂಕದ ಚಿನ್ನ ಪತ್ತೆಯಾಗಿದ್ದು, ಮೂವರನ್ನು ವಿಚಾರಣೆ ನಡೆಸಲಾಗುತ್ತಿದೆ.