ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿಂತಾಮಣಿಯಲ್ಲಿ ಆಕ್ರೋಶ
1 min readರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿಂತಾಮಣಿಯಲ್ಲಿ ಆಕ್ರೋಶ
ವಕ್ಫ್ ಬೋರ್ಡಿನ ನೋಟಿಸ್ ಖಂಡಿಸಿ ಬೃಹತ್ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಒಡೆದು ಆಕ್ರೋಶ
ರೈತರ, ಹಿಂದೂ ದೇವಾಲಯಗಳ ಜಮೀನು ತಮ್ಮದೆಂದು ನೋಟಿಸ್ ನೀಡಿರುವ ವಕ್ಫ್ ಬೋರ್ಡಿನ ಕ್ರಮ ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಂದು ಚಿಂತಾಮಣಿಯಲ್ಲಿ ಉಗ್ರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಒಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಚಿಂತಾಮಣಿಯಲ್ಲಿ ವಕ್ಫ್ ನೋಟಿಸ್ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ರಾಜ್ಯದ ರೈತರು, ಹಿಂದೂ ದೇವಾಲಯಗಳು ಸೇರಿದಂತೆ ಇತರೆ ಭೂಮಿ ತಮಮ್ದೆಂದು ವಕ್ಫ್ ಬೋರ್ಡ್ ನೋಟಿಸ್ ನೀಡಿದ್ದು, ಈ ನೋಟಿಸ್ ನೀಡಿರುವ ಹಿಂದೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ನೇರ ಕೈವಾಡವಿದೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು.
ಚಿಂತಾಮಣಿ ನಗರದ ಅಜಾದ್ ಚೌಕ ಹರಿ ಹರೇಶ್ವರ ದೇವಸ್ಥಾನದ ಮುಂಭಾಗದಿ0ದ ನೂರಾರು ಬಿಜೆಪಿ ಕಾರ್ಯಕರ್ತರು ನಗರದ ಬೆಂಗಳೂರು ರಸ್ತೆ ಮೂಲಕ ಮೆರವಣಿಗೆ ತೆರಳಿ, ತಾಲೂಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನೂರಾರು ಬಿಜೆಪಿ ಕಾರ್ಯಕರ್ತರು ನಡೆಸಿದ ಮೆರವಣಿಗೆಯಲ್ಲಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡ ದೇವನಹಳ್ಳಿ ಗೋಪಿ ಮಾತನಾಡಿ, ತುಘಲಕ್ ದರ್ಬಾರ್ ನಡೆಸುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ ರಾಜ್ಯದಲ್ಲಿ ರೈತರ ಮತ್ತು ದೇವಾಲಯಗ¼ ಜಮೀನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ವಕ್ಫ್ ಬೋರ್ಡ್ ಆಸ್ತಿಯನ್ನು ರಾಷ್ಟಿಕರಣ ಮಾಡಬೇಕು, ದೇವಾಲಯ, ಮಠ, ಮಂದಿರಗಳ ಒಂದು ಇಂಚು ಜಮೀನು ಕಬಳಿಸಲು ಪ್ರಯತ್ನಿಸಿದರೆ ರಸ್ತೆಗೆ ಇಳಿದು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕೆಲಕಾಲ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಂತರ ಉಪ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರಾಜಣ್ಣ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರದೀಪ್, ಡಾಬಾ ಮಂಜುನಾಥ್. ವಿನೋದ್ ಕುಮಾರ್, ಮಹೇಶ್ ಇದ್ದರು.