ಜನರ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಸಭೆ ಉಪಯುಕ್ತ
1 min readಜನರ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಸಭೆ ಉಪಯುಕ್ತ
ಸಾರ್ವಜನಿಕರ ಸದುಪಯೋಗಕ್ಕೆ ಶಾಸಕರ ಮನವಿ
300ಕ್ಕೂ ಹೆಚ್ಚು ಪಿಂಚಣಿ ಪತ್ರಗಳ ವಿತರಣೆ
ಗ್ರಾಮೀಣ ಜನರು ಸರಕಾರಿ ಸೌಲಭ್ಯ ಹಾಗೂ ಹಲವು ಆಡಳಿತಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಿದ್ದು, ನಾಗರೀಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.
ಬಾಗೇಪಲ್ಲಿ ತಾಲೂಕಿನ ಪೈಪಾಳ್ಯದಲ್ಲಿ ತಾಲೂಕು ಕಂದಾಯ ಇಲಾಖೆ, ತಾಲೂಕು ಪಂಚಾಯತಿ ಆಶ್ರಯದಲ್ಲಿ ಪೋಲನಾಯಕನಹಳ್ಳಿ ಮತ್ತು ಜೂಲಪಾಳ್ಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ನಾಗರೀಕರ ಕುಂದುಕೊರತೆ ಪರಿಹರಿಸಲು ಜನಸ್ಪಂದನಾ ಕಾರ್ಯಕ್ರಮ ಇಂದು ಆಯೋಜಿಸಲಾಗಿತ್ತು. ಈ ವೇಳೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಮಾತನಾಡಿ, ಜನಸ್ಪಂದನಾ ಕಾರ್ಯಕ್ರದ ಮೂಲಕ ತಾಲೂಕು ಮಟ್ಟದ ನಾನಾ ಇಲಾಖೆಗಳ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಿ,ಪರಿಹಾರೋಪಾಯಗಳನ್ನು ನೀಡುತ್ತಾರೆ.ಹಾಗಾಗಿ ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎರಡೂ ಗ್ರಾಮ ಪಂಚಾಯತಿಗಳಿ0ದ 4 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ರಸ್ತೆ, ನಿವೇಶನ, ವಸತಿ, ಪಡಿತರ ಚೀಟಿ, ಸಾರಿಗೆ ಸಮಸ್ಯೆ, ಕುಡಿಯುವ ನೀರು ಸಮಸ್ಯೆ ಸೇರಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಜನಸ್ಪಂದನಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬ0ಧಿಸಿ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ. ಗೃಹಲಕ್ಷ್ಮೀ, ಅನ್ನ ಭಾಗ್ಯ
ಪೀಡಿತರ ಕಾರ್ಡ್, ಜಮೀನು ಸಮಸ್ಯೆ, ಜಮೀನಿಗೆ ರಸ್ತೆ, ವಿದ್ಯುತ್ ಸಮಸ್ಯೆ ಸೇರಿದಂತೆ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ೬೦೦ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಶಾಸಕರು ತಿಳಿಸಿದರು.
ಜೂಲಪಾಳ್ಯ ಪಂಚಾಯಿತಿಗೆ ಸೇರಿದ ಅಂಗವಿಕಲರ ಫಲಾನುಭವಿಗಳಿಗೆ ಜಿಲ್ಲಾ ವಿಶೇಷ ಚೇತನರ ಪುನರ್ವಸತಿ ಕೇಂದ್ರದಿ0ದ ವಿಶೇಷ ಚೇತರಿಗೆ ಅಗತ್ಯವಾದ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕಂದಾಯ ಇಲಾಖೆ ವ್ಯಾಪ್ತಿಯ ೩೦೦ಕ್ಕೂ ಹೆಚ್ಚು ಪಿಂಚಣಿ, ಭಾಗ್ಯಲಕ್ಷಿ ಬಾಂಡ್ , 90 ಮಂದಿಗೆ ಹಕ್ಕು ಪತ್ರಗಳನ್ನು, 21 ಗ್ರಾಮಗಳಿಗೆ ಸ್ಮಶಾನ ಮಂಜುರಾತಿ ಪತ್ರಗಳು, ಸಾಗುವಳಿ ಚೀಟಿ, ಖಾತೆಗಳು, ಮನೆ ಹಾನಿ, ಆಕಸ್ಮಿಕವಾಗಿ ಮರಣ ಹೊಂದಿದವರ ಕುಟುಂಬಸ್ಥರಿಗೆ ಪರಿಹಾರದ ಚೆಕ್‌ಗಳು, ತಾಲೂಕು ಪಂಚಾಯತಿಯಿ0ದ ನರೇಗಾ ಜಾಬ್ ಕಾರ್ಡ್, ಎನ್‌ಆರ್ ಎಲ್‌ಎಮ್ ಯೋಜನೆ ಸೇರಿದಂತೆ ನಾನಾ ಯೋಜನೆಗಳ 1,130 ಫಲಾನುಭವಿಗಳಿಗೆ ಸೌಲಭ್ಯಗಳ ಆದೇಶ ಪತ್ರಗಳನ್ನು ವಿತರಿಸಲಾಯಿತು.
ಇದೇ ವೇಳೆ 10 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ನಡೆಸಲಾಯಿತು. ಕೋಚಿಮುಲ್ ನಿರ್ದೇಶಕ ಮಂಜುನಾಥರೆಡ್ಡಿ, ತಹಶೀಲ್ದಾರ್ ಮನಿಷಾ ಮಹೇಶ್ ಎಸ್. ಪತ್ರಿ, ಇಒ ರಮೇಶ್, ಬಿಇಒ ಎನ್. ವೆಂಕಟೇಶಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಎಂ. ಜಗದೀಶ್ ಇದ್ದರು.
ಸಹಾಯಕ ಕೃಷಿ ನಿರ್ದೇಶಕಿ ಲಕ್ಷಿ, ಸರ್ಕಲ್ ಇನ್ಸ್ಪೆಕ್ಟರ್ ಪ್ರಶಾಂತ್ ಆರ್ ವರ್ಣಿ, ಸಿಡಿಪಿಒ ರಾಮಚಂದ್ರ, ಬೂರಗಮಡುಗು ನರಸಿಂಹಪ್ಪ, ಪಿ.ಮಂಜುನಾಥರೆಡ್ಡಿ, ಜೂಲಪಾಳ್ಯ ಮತ್ತು ಪೋಲನಾಯಕನಹಳ್ಳಿ ಗ್ರಾಮ ಪಂಚಾಯತಿಗಳ ಪಿಡಿಒ, ಜನಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.