ಭಾರೀ ವಾಹನಗಳಿಗೆ ಪಿನಾಕಿನಿ ಸೇತುವೆ ಬಂದ್
1 min read
ಭಾರೀ ವಾಹನಗಳಿಗೆ ಪಿನಾಕಿನಿ ಸೇತುವೆ ಬಂದ್
ಸೇತುವೆ ಮೇಲೆ ಲಘು ವಾಹನಗಳಿಗೆ ಮಾತ್ರ ಪ್ರವೇಶ
ಗೌರಿಬಿದನೂರು ನಗರದಿಂದ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಮಾರ್ಗದಲ್ಲಿರುವ ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಹಿನ್ನಲೆಯಲ್ಲಿ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಗೌರಿಬಿದನೂರು ಹೊರವಲಯದಲ್ಲಿರುವ ಉತ್ತರ ಪಿನಾಕಿನಿ ನದಿ ಸೇತುವೆ ದುರಸ್ತಿ ಕಾರ್ಯ ಆರಂಭವಾಗಿದೆ. ಹಾಲಿ ಇರುವ ಹಳೆ ಸೇತುವೆ ತೆರವುಗೊಳಿಸಿ ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಈಗ ಇರುವ 8 ಮೀ. ಇರುವ ಸೇತುವೆಯನ್ನು ತೆರವುಗೊಳಿಸಿ 16 ಮೀ ಸೇತುವೆ ನಿರ್ಮಿಸಲಾಗುವುದು. ಮಳೆಗಾಲದಲ್ಲಿ ಸ್ಥಗಿತಗೊಂಡಿದ್ದ ಹಳೆ ಸೇತುವೆ ತೆರವು ಕಾರ್ಯಾಚರಣೆ ಮತ್ತೆ ಪ್ರಾರಂಭಿಸಲಾಗಿದೆ. ಈ ಹಿನ್ನಲೆಯಲ್ಲಿ ಸೇತುವೆ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ತಾತ್ಕಾಲಿಕವಾಗಿ ದ್ವಿಚಕ್ರ ವಾಹನ, ಆಟೋರಿಕ್ಷಾದಂತಹ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದ ಭಾರೀ ವಾಹನಗಳಿಗೆ ಬೈಪಾಸ್ ರಸ್ತೆಯ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ. 6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಭಿವೃದ್ಧಿಕಾಮಗಾರಿ ನಡೆಸುತ್ತಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸುವ ಮೂಲಕ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ.