ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ

1 min read

ಪರಿಸರ ಸಮತೋಲನಕ್ಕಾಗಿ ಗಿಡ-ಮರ ಬೆಳೆಸಿ
ದೇವನಹಳ್ಳಿಯಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ಎಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಪ್ರಕೃತಿ ವಿಕೋಪಗಳನ್ನು ತಪ್ಪಿಸಲು ಪ್ರಕೃತಿಯ ಸಮತೋಲನ ಕಾಪಾಡಲು ಗಿಡ-ಮರಗಳನ್ನು ಬೆಳೆಸಲು ಎಲ್ಲರು ಅಣಿಯಾದಾಗ ಮಾತ್ರ ಸರಿಯಾದ ಸಮಯಕ್ಕೆ ಮಳೆ, ಬೆಳೆ, ಪರಿಸರ ಸಮತೋಲನ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು. ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಆಯೋಜಿಸಿದ್ದ ವನ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ತಮ್ಮ ಜಮೀನುಗಳಲ್ಲಿ ಮೂರನೇ ಒಂದು ಭಾಗ ಮಾವು, ತೆಂಗು, ಹಲಸು, ನೇರಳೆ ಮುಂತಾದ ಆದಾಯದ ಗಿಡ-ಮರಗಳನ್ನು ಬೆಳೆಸಿದರೆ ಆದಾಯದ ಜೊತೆಗೆ ಪರಿಸರ ಸಮತೋಲನ ನಿರ್ಮಾಣವಾಗುತ್ತದೆ. ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಪ್ಪಿಸಬಹುದು. ಜಿಲ್ಲೆಯಲ್ಲಿ  ಅರಣ್ಯ ಇಲಾಖೆಯಿಂದ ರಸ್ತೆಗಳ ಎರಡು ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲಾಗುತ್ತಿದೆ. ಪ್ರತಿಯೊಬ್ಬರೂ ಮನೆಗಳ ಸುತ್ತಮುತ್ತ ಗಿಡ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ಇದರಿಂದ ವಾತಾವರಣದ ಮಾಲಿನ್ಯ ನಿಯಂತ್ರಿಸಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗಾರ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2,298 ಕಿ.ಮೀ ವ್ಯಾಪ್ತಿ ಹೊಂದಿದ್ದು, 22,800 ಹೆಕ್ಟೇರ್ ಭೂ ವಿಸ್ತೀರ್ಣ ಹೊಂದಿದೆ. 203.89 ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದೆ. ಒಟ್ಟು ಭೂ ಪ್ರದೇಶದಲ್ಲಿ ಶೇ.8.8 ರಷ್ಟು ಅರಣ್ಯ ಭೂಮಿ ಆವೃತ್ತಿಯಾಗಿದೆ. ಈ ನಿಟ್ಟಿನಲ್ಲಿ ಪರಿಸರ ಸಮತೋಲನ ಕಾಪಾಡುವ ದೃಷ್ಟಿಯಿಂದ ಅರಣ್ಯೀಕರಣ, ವನ್ಯಜೀವಿ ಸಂರಕ್ಷಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆಯಿಂದ ಆಯೋಜಿಸಲಾಗುತ್ತಿದೆ ಎಂದರು.

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಕಳೆದ ಐದು ವರ್ಷಗಳಲ್ಲಿ 2,400 ಹೆಕ್ಟೇರ್ ನೆಡುತೋಪು ಮಾಡಲಾಗಿದೆ. 383 ರೈತ ಫಲಾನುಭವಿಗಳಿಗೆ 16 ಲಕ್ಷ ಸಸಿ ವಿತರಿಸಲಾಗಿದ್ದು, ಗಿಡಗಳನ್ನು ಬೆಳೆಸಿ ಪೋಷಿಸಲು ಈವರೆಗೆ 74 ಲಕ್ಷ ರೂ.ಗಳ ಹಣ ರೈತ ಫಲಾನುಭವಿಗಳಿಗೆ ನೀಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ನೇತ್ರಾವತಿ, ನೀಲಮ್ಮ, ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧಾ, ಉಪವಿಭಾಗಾಧಿಕಾರಿ ದುರ್ಗಶ್ರೀ ಎನ್, ಜಿಲ್ಲಾಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಇದ್ದರು.

About The Author

Leave a Reply

Your email address will not be published. Required fields are marked *