ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ
1 min readಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರದಲ್ಲಿ ದಲಿ ಸಂಘಟನೆಗಳಿ0ದ ಆಕ್ರೋಶ
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಘಾಸಿ ಉಂಟುಮಾಡಿದೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿ0ದ ವಜಾ ಮಾಡಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರ ಸಂಜೀವ್ ನಾಯಕ್ ಆಕ್ರೋಶ ವ್ಯಕ್ತ ಪಡಿಸಿದರು.
ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಪ್ರತಿಭಟನೆ ನೆಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಸಂಜೀವ್ ನಾಯಕ್, ಭಾರತದ ಚರಿತ್ರೆಯಲ್ಲಿ ಜಾತಿ ವ್ಯವಸ್ಥೆಯಿಂದ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಪ್ರತಿಪಾದಿಸಿದ ಭಾರತ ರತ್ನ ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಮೆಚ್ಚುವ ಸಂವಿಧಾನ ರಚಿಸಿದ್ದಾರೆ ಎಂದರು.
ಬಾಬಾ ಸಾಹೇಬರು ಬರೆದ ಸಂವಿಧಾನದಿ0ದ ದೇಶದ ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಅಕ್ಷರ, ಅಧಿಕಾರ ದೊರೆತು, ಸಮಾಜದಲ್ಲಿ ತಲೆ ಎತ್ತಿ ನಿಲ್ಲವಂತಾಯಿತು. ಆದರೆ, ಈ ಸಂವಿಧಾನ ಹಾಗೂ ಅಂಬೇಡ್ಕರ್ ಅವರನ್ನು ಆರಂಭದಿ0ದಲೂ ವಿರೋಧಿಸುತ್ತಾ ಬಂದ ಸಂಘಪರಿವಾರ ಮತ್ತು ಬಿಜೆಪಿ ಪರಿಷ್ಕರಣೆ ಎಂಬ ಹೆಸರಿನಲ್ಲಿ ಸಂವಿಧಾನ ಬದಲಾವಣೆಯ ಮಾತುಗಳನ್ನು ಅಡಿತ್ತು ಎಂದರು.
ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ದಲಿತ ಮುಖಂಡರಾದ ರಾಮಮೂರ್ತಿ ನೇರಳೆಘಟ್ಟ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿ0ದ ವಜಾ ಮಾಡಿ ಅವರ ವಿರುದ್ಧ ಸೂಕ್ತ ಕಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.