ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
1 min readರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆಗೆ ವಿರೋಧ
ಬೆಸ್ಕಾಂ ಕಚೇರಿ ಎದುರು ರೈತಸಂಘದಿ0ದ ಪ್ರತಿಭಟನೆ
ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆ ಮಾಡುವ ಮೂಲಕ ಮೀಟರ್ ಅಳವಡಿಸಿ, ಶುಲ್ಕ ವಿಧಿಸುವ ಉದ್ದೇಶ ರಾಜ್ಯ ಸರ್ಕಾರ ಹೊಂದಿದ್ದು, ಇದು ಖಂಡನೀಯ, ರೈತರ ಬೆನ್ನು ಮುರಿಯುವ ಈ ಕೆಲಸವನ್ನು ರೈತರು ಮುಕ್ತ ಕಂಠದಿ0ದ ವಿರೋಧಿಸಲಿದ್ದು, ಕೂಡಲೇ ಸರ್ಕಾರ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಕ್ರೋಶ ವ್ಯಕ್ತಪಡಿಸಿದೆ.
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಿಸಿ, ಆ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಿಧಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಿಂದ ನಗರದ ಬೆಸ್ಕಾಂ ಕಚೇರಿ ವರೆಗೂ ರೈತ ಮುಖಂಡ ಭಕ್ತರಹಳ್ಳಿ ಬೈರೇಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದ ರೈತರು, ಕೃಷಿ ಕೊಳವೆಬಾವಿಗಳಿಗೆ 2023 ರಿಂದ ಟ್ರಾನ್‌ಫ್ಸಾರ್ಮರ್, ವಿದ್ಯುತ್ ಕಂಬಗಳು, ವೈರು ಸೇರಿದಂತೆ ಇತರೆ ಸಾಮಗ್ರಿಗಳನ್ನು ರೈತರು ಸ್ವಂತ ಖರ್ಚಿನಲ್ಲಿ ಖರೀದಿಸಿ, ವಿದ್ಯುತ್ ಸಂಪರ್ಕ ಪಡೆಯಬೇಕೆಂದು ಕಾನೂನು ಜಾರಿಗೊಳಿಸಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕೊಳವೆ ಬಾವಿಗಳ ಆಶ್ರಯದಲ್ಲಿ ರೈತರು ಕೃಷಿ ನಡೆಸುತ್ತಿದ್ದಾರೆ. ಬೆಳೆಗಳಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವವರೆಗೆ, ಕೃಷಿ ಕ್ಷೇತ್ರಕ್ಕೆ ಮೂಲ ಸೌಕರ್ಯಗಳಾದ ಭೂಮಿ, ರಸ್ತೆ, ನೀರು, ವಿದ್ಯುತ್, ಬಿತ್ತನೆ ಬೀಜ, ರಸಗೊಬ್ಬರ ಕೀಟ ನಾಶಕ, ಯಂತ್ರೋಪಕರಣಗಳಿಗೆ ಸಹಾಯ ನೀಡುವುದು ಸರ್ಕಾರದ ಜವಾಬ್ದಾರಿ. ಆದರೆ ರಾಜ್ಯ ಸರ್ಕಾರ ಹೊಸ ಕಾನೂನುಗಳನ್ನು ತರುವ ಮೂಲಕ ರೈತರ ಕತ್ತು ಹಿಸುಕುವ ಕಾರ್ಯಕ್ಕೆ ಮುಂದಾಗಿದೆ ಎಂದು ಹರಿಹಾಯ್ದರು. ರೈತರು ಪ್ರಸ್ತುತ ವಿದ್ಯುತ್ ಸೇರಿದಂತೆ ಇತರೆ ಸಮಸ್ಯೆಗಳಿಂದ ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರದ ಈ ಉದ್ಧೇಶ ಈಡೇರಿದರೆ ಬೆಳೆ ಬೆಳೆಯುವುದನ್ನು ಕೈಬಿಡುವ ಆತಂಕ ಎದುರಾಗಿದೆ ಎಂದರು.
ಸರ್ಕಾರ ಈಗಾಗಲೇ ವಿದ್ಯುತ್ ದರ ಹೆಚ್ಚಿಸಿದ್ದು, ಕೂಡಲೇ ಕಡಿಮೆ ಮಾಡಬೇಕು. ವಿದ್ಯುತ್ ಅಪಘಾತಗಳಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬಕ್ಕೆ ಕನಿಷ್ಠ 10 ಲಕ್ಷ ಪರಿಹಾರ ನೀಡಬೇಕು. ಸೋಲಾರ್ ಸಂಪರ್ಕ ಹೊಂದುವ ಪಂಪ್ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಉದ್ದೇಶ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಅಲ್ಲದೆ ರೈತರ ಬೆಳೆಗಳಿಗೆ ಬಂಬಲ ನೀಡುವ ಉದ್ಧೇಶ ಈ ಸರ್ಕಾರಕ್ಕಿಲ್ಲ, ರೈತರಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಅನುಷ್ಠಾನ ಮಾಡುವ ಉದ್ಧೇಶ ಈ ಸರ್ಕಾರಕ್ಕಿಲ್ಲ, ರೈತರಿಗೆ ಉಥ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ಧೇಶವೂ ಈ ಸರ್ಕಾರಕ್ಕಿಲ್ಲ, ಆದರೆ ರೈತರ ಮೇಲೆ ಹೇಗೆ ತೆರಿಗೆ ವಿಧಿಸಬೇಕು ಮತ್ತು ರೈತರಿಂದ ಹೇಗೆ ಹಣ ಸುಳಿಗೆ ಮಾಡಬೇಕು ಎಂಬ ಯೋಚನೆ ಮಾತ್ರ ಸರ್ಕಾರಕ್ಕಿದ್ದು, ಇಂತಹ ರೈತ ವಿರೋಧಿ ಆಲೋಚನೆಗಳನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ರೈತರ ಮೇಲಿನ ದೌರ್ಜನ್ಯಗಳನ್ನು ಕೂಡಲೇ ಕೈ ಬಿಡಬೇಕು, ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ರೈತ ದೇಶದ ಬೆನ್ನೆಲುಬು ಎಂದು ಹೇಳುತ್ತಲೇ ಸರ್ಕಾರಗಳು ರೈತನ ಬೆನ್ನೆಲುಬು ಮುರಿಯುವ ಕೆಲಸಕ್ಕೆ ಪದೇ ಪದೇ ಮುಂದಾಗುತ್ತಿದ್ದು, ಇದು ತೀವ್ರ ಖಂಡನೀಯ. ರೈತನಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿದರೆ ದೇಶಕ್ಕೆ ಅನ್ನ ನಡೀಉತ್ತಾನೆ ಎಂಬ ಕನಿಷ್ಠ ನವೂ ಇಲ್ಲದ ಸರ್ಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಶುಲ್ಕ ವಿಧಿಸಲು ಮುಂದಾದರೆ ಮುಂದಿನ ದಿನಗಳಲ್ಲಿ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.