ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಖಂಡಿಸಿ ಪ್ರತಿಭಟನೆ
1 min readವಾಲ್ಮೀಕಿ ನಿಗಮದ 187 ಕೋಟಿ ಹಗರಣ ಖಂಡಿಸಿ ಪ್ರತಿಭಟನೆ
ಪ್ರತಿ ಜಿಲ್ಲೆಯ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರು ಮತ್ತು ಹಿಂದುಳಿದವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು 11 ಸಾವಿರ ಕೋಟಿ ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಆಗಲೇ ಜನರು ಎಚ್ಚೆತ್ತುಕೊಳ್ಳಬೇಕಾಗಿತ್ತು ಎಂದು ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಚಿಕ್ಕರಂಗನಾಯಕ ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರು ಮತ್ತು ಹಿಂದುಳಿದವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು 11 ಸಾವಿರ ಕೋಟಿ ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಆಗಲೇ ಜನರು ಎಚ್ಚೆತ್ತುಕೊಳ್ಳಬೇಕಾಗಿತ್ತು ಎಂದು ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಚಿಕ್ಕರಂಗನಾಯಕ ಆರೋಪಿಸಿದರು. ನಂಜನಗೂಡಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ವಾಲ್ಮೀಕಿ ನಿಗಮಕ್ಕೆ ಬರುವ ಹಣಕ್ಕೆ ರಾಜ್ಯ ಸರ್ಕಾರ ಕೈ ಹಾಕಿದೆ. ಕಡುಬಡವರಿಗೆ ನೆರವಾಗಲೆಂದು ನಿಗಮಗಳು ಮಾಡಲಾಗಿದೆ. ನಿಗಮದಿಂದ ಬಡ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವಾಗಿದೆ ಎಂದು ಹೇಳಿದರು.
ನಿಗಮದ ಹಣದಿಂದ ಜಮೀನಿಲ್ಲದ ಜನರಿಗೆ ಜಮೀನು ಖರೀದಿಸಲು ಸಹಾಯವಾಗುತ್ತದೆ ವ್ಯವಸಾಯಕ್ಕೆ ಅನುಕೂಲವಾಗಲ ಕೊಳವೆ ಬಾವಿ ಕೊರಿಸಲು ಮತ್ತು ಬಡವರ ಮಕ್ಕಳಿಗೆ ಓದಲು ಹಾಗೂ ಸ್ವಯಂ ಉದ್ಯೋಗಕ್ಕೆ ಮೀಸಲಿಟ್ಟ ಹಣವಾಗಿದೆ. ಈ ಮೀಸಲು ಹಣವನ್ನು ರಾಜ್ಯ ಸರ್ಕಾರ ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಹಣವನ್ನು ವರ್ಗಾಯಿಸಲಾಗಿದೆ. ಜ್ಯೂವಲೆರಿ, ಬಾರ್ ತೆರೆಯಲು ಜೊತೆಗೆ ತೆಲಂಗಾಣದಲ್ಲಿ ನಡೆಯುತ್ತಿದ್ದ ವಿಧಾನಸಭಾ ಚುನಾವಣೆಗೆ ಎಸ್.ಟಿ ಜನಾಂಗದ ಹಣವನ್ನು ಬಳಕೆ ಮಾಡಿರುವುದು ರಾಜ್ಯಸರ್ಕಾರದ ನಾಚಿಗೇಡಿನ ಸಂಗತಿಯಾಗಿದೆ ಎಂದರು.
ಈ ಹಗರಣವನ್ನು ಕೂಲಂಕುಷವಾಗಿ ಪರಿಶೀಲನೆ ಮಾಡಿ ಸರ್ಕಾರದ ಹಿಂದೆ ಯಾರಿದ್ದಾರೆ ಎಂಬುದು ತನಿಖೆಗೆ ಒಳಪಡಿಸಬೇಕಾಗಿದೆ. ಈ ಪ್ರಕರಣಕ್ಕೆ ಸಂಬoಧಿಸಿ ಸಚಿವ ನಾಗೇಂದ್ರ ತಲೆತಂಡವಾಗಿದೆ ಈ ಹಗರಣದಿಂದ ಯಾರ ಕೈವಾಡವಿದೆ ಎಂಬುದು ಸ್ಪಷ್ಟಪಡಿಸಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹಣಕಾಸು ಸಚಿವರಾಗಿದ್ದರು ಅವರಿಗೆ ಗೊತ್ತಿಲ್ಲದೆ ಯಾವ ರೀತಿ ಹಗರಣ ನಡೆಯಿತು ಈ ನಿಗಮದಲ್ಲಿ ಎಂಬುದು ಪ್ರಶ್ನೆಯಾಗಿದೆ ಎಂದರು.
ಸಿದ್ದರಾಮಯ್ಯನವರೇ ಹಣಕಾಸು ಸಚಿವರಾಗಿದ್ದು, ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗಿದೆ. ಈ ವಾಲ್ಮೀಕಿ ನಿಗಮದ ಹಗರಣದ ರೂವಾರಿಗಳು ಯಾರು? ಅಧಿಕಾರಿಯ ಆತ್ಮಹತ್ಯೆಯ ಹೊಣೆ ಹೊರುವವರು ಯಾರು? ಅನ್ಯಾಯಕ್ಕೆ ಒಳಗಾಗಿರುವ ಎಸ್ ಟಿ ಸಮುದಾಯಕ್ಕೆ ನ್ಯಾಯ ಒದಗಿಸುವವರು ಯಾರು? ಎಂಬ ಪ್ರಶ್ನೆಯನ್ನು ಮುಂದೆ ಇಟ್ಟುಕೊಂಡು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಅಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ಈ ಹಿನ್ನೆಲೆಯಲ್ಲ ಪ್ರತಿ ಮನೆಗೆ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದ ಬಗ್ಗೆ ಕರಪತ್ರ ಹಂಚುವ ಮೂಲಕ ಬಿಜೆಪಿಯ ಎಸ್ ಟಿ ಮೊರ್ಚದಿಂದ 98 ರಂದು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ತಾಲ್ಲೂಕಿನ ದೇಬೂರು ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಚಿಕ್ಕರಂಗನಾಯಕ ತಿಳಿಸಿದರು.
ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾದ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಂಡಳಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಸೋಮನಾಯಕ, ಸುಧೀಂದ್ರ ಕುಮಾರ್, ಎಸ್ ಟಿ.ಮೋರ್ಚ ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರವಿ, ರಾಜನಾಯಕ, ಸೀನಾ ಇದ್ದರು.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday