ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಮಾಸಿಕ ವೇತನ 15 ಸಾವಿರ ನೀಡಲು ಆಗ್ರಹಿಸಿ ಪ್ರತಿಭಟನೆ

1 min read

ಮಾಸಿಕ ವೇತನ 15 ಸಾವಿರ ನೀಡಲು ಆಗ್ರಹಿಸಿ ಪ್ರತಿಭಟನೆ

ಸಿಎಂ ಸಿದ್ದರಾಮಯ್ಯ ನೀಡಿದ್ದ ಭರವಸೆ ಈಡೇರಿಸುವಂತೆ ಆಗ್ರಹ

ಬೆಳಗಾಂ ಅಧಿವೇಶನದಲ್ಲಿ ಬೇಡಿಕೆ ಈಡೇರದಿದ್ದರೆ ಜ.7 ರಿಂದ ಅನಿರ್ದಿಷ್ಟ ಹೋರಾಟ

ಚಿಕ್ಕಬಳ್ಳಾಪುರದಲ್ಲಿ ಆಶಾ ಕಾರ್ಯಕರ್ತೆಯರ ಎಚ್ಚರಿಕೆ

ಬೆಳಗಾವಿ ಅಧಿವೇಶನದಲ್ಲಿ ಅಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ 15 ಸಾವಿರ ಏರಿಕೆ ಮಾಡಿ ಆದೇಶ ಹೊರಡಿಸದಿದ್ದರೆ ಜನವರಿಯಿಂದಲೇ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಆಶಾ ಕಾರ್ಯಕರ್ತೆಯರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಎಐಯುಟಿಯುಸಿ ನೇತೃತ್ವದಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿತು. ಬೆಂಗಳೂರಿನಲ್ಲಿ ಒಂದು ವರ್ಷದ ಹಿಂದೆ ಆಶಾ ಕಾರ್ಯಕರ್ತೆಯರು ನಡೆಸಿದ್ದ ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆ ಈಡೇರಿಸಿ ನುಡಿದಂತೆ ನಡೆವ ಸರಕಾರ ಎನ್ನಿಸಿಕೊಳ್ಳಬೇಕು ಎಂದು ಹೇಳಿದರು.

ಬೆಳಗಾಂ ಅಧಿವೇಶನದಲ್ಲಿ ಪ್ರಥಮ ಆಧ್ಯತೆಯಾಗಿ ಆಶಾ ಕಾರ್ಯಕರ್ತರ ವಿಷಯವನ್ನು ಚರ್ಚೆಗೆ ಎತ್ತಿಕೊಂಡು ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ನೂತನ ವರ್ಷ 2025 ಜನವರಿಯಿಂದಲೇ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಈಗ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 12 ಸಾವಿರ ಮತ್ತು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ 3 ಸಾವಿರ ಹೆಚ್ಚಳ ಸೇರಿಸಿ, ಒಟ್ಟು 15 ಸಾವಿರ ಮಾಸಿಕ ಗೌರವಧನ ನಿಗದಿಯಾಗಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 20 ಸಾವಿರ ಗೌರವಧನ ಹೆಚ್ಚಿಗೆ ಮಾಡಬೇಕು. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಕುರಿತು ಸಮಾಜದ ಆರೋಗ್ಯಕರ ಬದಲಾವಣೆಗೆ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ತೀವ್ರ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ ೩ ತಿಂಗಳು ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರೊಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು

About The Author

Leave a Reply

Your email address will not be published. Required fields are marked *