ರಾಜ್ಯಪಾಲರ ಕ್ರಮ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
1 min readರಾಜ್ಯಪಾಲರ ಕ್ರಮ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
ಬಿಜೆಪಿ, ಜೆಡಿಎಸ್ ನಾಯಕರ ಕೈವಾಡ ಎಂದು ಆರೋಪ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದ ನೆಪದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ತೇಜೋವಧೆ ಮಾಡುತ್ತಿರುವುದು ನಿಲ್ಲಿಸಬೇಕೆಂದು ಶೋಷಿತ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದ ನೆಪದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ತೇಜೋವಧೆ ಮಾಡುತ್ತಿರುವುದು ನಿಲ್ಲಿಸಬೇಕೆಂದು ಶೋಷಿತ ಸಮುದಾಯಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದ ನೆಪದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ತೇಜೋವಧೆ ಮಾಡುತ್ತಿರುವುದು ಖಂಡಿಸಿ ದಿಕ್ಕಾರ ಕೂಗಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಇತ್ತಿಚೇಗೆ ರಾಜ್ಯದಲ್ಲಿ ಕೋಮುವಾದಿಗಳು ಮತ್ತು ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರದ ಆಸೆಗಾಗಿ ಜನಪರ ಇರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಿದ್ದಾರೆ. 40 ವರ್ಷಗಳ ಸುದೀರ್ಘ ರಾಜಕೀಯದಲ್ಲಿ ಹಲವು ಮಹತ್ವದ ಅಧಿಕಾರದ ಹುದ್ದೆಯಲ್ಲಿ ಇದ್ದರೂ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯನವರ ವರ್ಚಸ್ಸಿಗೆ ಮಸಿ ಬಳಿದು ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ಮಾಡುತಿದ್ದಾರೆ ಎಂದರು.
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರಕ್ಕೆ ಬಿಜೆಪಿ ರಾಷ್ಟಿಯ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯಪಾಲರ ಮುಖಾಂತರ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ತಿರಗೊಳಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸುತ್ತಿದೆ ಇದನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.