ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಶಾಲೆ ಮುಂದೆ ಪ್ರತಿಭಟನೆ
1 min readಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಶಾಲೆ ಮುಂದೆ ಪ್ರತಿಭಟನೆ
ಸಮರ್ಪಕ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಪೋಷಕರ ಹೋರಾಟ
ಗೌರಿಬಿದನೂರು ತಾಲೂಕಿನಲ್ಲಿ ಶಿಕ್ಷಕರ ಕೊರತೆ
ಗೌರಿಬಿದನೂರು ತಾಲ್ಲೂಕಿನ ಹೊಸೂರು ಹೋಬಳಿಯ ಹೊಸಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಮರ್ಪಕ ಶಿಕ್ಷಕರನ್ನು ಒದಗಿಸುವಂತೆ ಆಗ್ರಹಿಸಿ ಪೋಷಕರರು ಮತ್ತು ಗ್ರಾಮಸ್ಥರು ಶಿಕ್ಷಕರು ಬೇಕು ಎಂಬ ಘೋಷಣೆ ಕೂಗಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆಯಿತು.
ಗೌರಿಬಿದನೂರು ತಾಲೂಕಿನ ಹೊಸಕೋಟೆ ಸರ್ಕಾರಿ ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ಪೋಷಕರಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಪೋಷಕ ಮುರಳಿ, ಶಾಲೆಯಲ್ಲಿ ೫೬ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದರೆ ಶಿಕ್ಷಕರ ಕೊರತೆ ಹಿಂದಿನಿ0ದಲೂ ಇದೆ. ಸಾಕಷ್ಟು ಸಿಬ್ಬಂದಿ ಕೊರತೆಯಿಂದ ತರಗತಿಗಳು ನಡೆಯದೆ ಮಕ್ಕಳ ಶಿಕ್ಷಣ ಕುಂಟಿತವಾಗಿದೆ ಎಂದು ಆರೋಪಿಸಿದರು.
1 ರಿಂದ 7 ನೇ ತರಗತಿವರೆಗೂ ಭೊದನೆಗಳು ನಡೆಯುತ್ತಿದ್ದು, ಶಾಲೆಗೆ ಕೆವಲ ಇಬ್ಬರು ಶಿಕ್ಷಕರು ಮಾತ್ರ ಇದ್ದಾರೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಹಿನ್ನೆಡೆಯಾಗಿದೆ. ಈ ಹಿಂದೆಯೂ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೊಸೂರು ಹೋಬಳಿಯ ಶಿಕ್ಷಣ ಸಂಯೋಜಕ ಕೃಷ್ಣ ಕುಮಾರ್ ಸ್ಥಳಕ್ಕೆ ಆಗಮಿಸಿ, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಪೋಷಕರು ಪ್ರತಿಭಟನೆ ಹಿಂಪಡೆದರು. ಗ್ರಾಮ ಪಂಚಾಯಿತಿ ಸದಸ್ಯ ಮುರಿರಾಜು, ಎಸ್ ಡಿ ಎಂ ಸಿ ಅಧ್ಯಕ್ಷ ಅರುಣ್ ಕುಮಾರ್, ಸದಸ್ಯರಾದ ರಾಮಚಂದ್ರ, ಮಹೇಶ್ ಇದ್ದರು.