ಪುಲಗೂರಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರ ಆಯ್ಕೆ
1 min readಪುಲಗೂರಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರ ಆಯ್ಕೆ
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗ್ರಾಪಂ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಲಗೂರಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿದ್ದ ಲಕ್ಷಿದೇವಮ್ಮ ರಾಜೀನಾಮೆ ನೀಡಿದ ಕಾರಣ ತರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಲಗೂರಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾಗಿದ್ದ ಲಕ್ಷ್ಮಿದೇವಮ್ಮ ಎಂಬುವರು ರಾಜಿನಾಮೆ ನೀಡಿದ ಕಾರಣ ತೆರುವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದು, ರೂಪಶ್ರೀನಿವಾಸ್ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಜೇಶ್ ಘೋಷಣೆ ಮಾಡಿದರು.
ನೂತನ ಉಪಾಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರು ಶುಭ ಕೋರಿದರು. ಕಾಂಗ್ರೆಸ್ ಪಕ್ಷದ ಮುಖಂಡ ಕೆಕೆ ಮಂಜುನಾಥ ಮಾತನಾಡಿ, ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ರೂಪಶ್ರೀನಿವಾಸ್ ಅವರಿಗೆ ಶುಭ ಕೋರಿ, ತಮ್ಮ ಅಧಿಕಾರಾವಧಿಯಲ್ಲಿ ಉತ್ತಮ ಸೇವೆ ಸಲ್ಲಿಸುವಂತೆ ಸಲಹೆ ನೀಡಿದರು.
ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷರಾಗಿ ಜನರಿಗೆ ಉತ್ತಮ ಸೇವೆ ಮಾಡಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು ಕಾಂಗ್ರೆಸ್ ಮುಖಂಡರು ಹಾಜರಿದ್ದರು.