ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 2 ಲಕ್ಷ ರೂ. ದಂಡ
1 min readಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ನೊಂದ ಬಾಲಕಿಗೆ ಪರಿಹಾರವಾಗಿ 3 ಲಕ್ಷ ರೂ. ನೀಡುವಂತೆ ಹೆಚ್ಚುವರಿ ಜಿಲ್ಲಾ ಮತ್ತು ಸೆಸೆನ್ಸ್ ನ್ಯಾಯಾಲಯ ನ್ಯಾಯಾಧೀಶರು ಆದೇಶಿಸಿದ್ದಾರೆ.
2021ರಲ್ಲಿ ದಾವಣಗೆರೆ ಜಿಲ್ಲೆ ನ್ಯಾಮತಿಯ 34 ವರ್ಷದ ಯುವಕ 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ನೊಂದ ಬಾಲಕಿ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಆಗಿನ ತನಿಖಾಧಿಕಾರಿ ವಿನೋಬನಗರ ಸಿಪಿಐ ಎನ್.ಎಸ್. ರವಿ ತನಿಖೆ ನಡೆಸಿ ಆರೋಪಿ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.