ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 25, 2024

Ctv News Kannada

Chikkaballapura

ರೈಲ್ವೆ ಇಲಾಖೆ ಹೊಸ ಯೋಜನೆಗಳ ಜಾರಿಗೆ ಒತ್ತಾಯ

1 min read

ರೈಲ್ವೆ ಇಲಾಖೆ ಹೊಸ ಯೋಜನೆಗಳ ಜಾರಿಗೆ ಒತ್ತಾಯ
ಕಾಮಗಾರಿಗಳಿಗೆ ವೇಗ ನೀಡಲು ಸಂಸದ ಡಾ.ಕೆ.ಸುಧಾಕರ್ ಮನವಿ
ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ
ಸಚಿವರ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆೆ

ಹೊಸದಾಗಿ ಚಿಕ್ಕಬಳ್ಳಾಪುರ-ಗೌರಿಬಿದನೂರು ರೈಲ್ವೆ ಮಾರ್ಗ ನಿರ್ಮಾಣ, ಯಲಹಂಕ-ಚಿಕ್ಕಬಳ್ಳಾಪುರ ನಡುವೆ ಮಾರ್ಗದ ಡಬಲಿಂಗ್ ಕಾಮಗಾರಿ, ಬಂಗಾರಪೇಟೆ-ಯಲಹ0ಕ ನಡುವೆ ವಿದ್ಯುದೀಕರಣ ಸೇರಿದಂತೆ ರೈಲ್ವೆ ಇಲಾಖೆಗೆ ಸಂಬ0ಧಿಸಿದ ಪ್ರಮುಖ ಯೋಜನೆ ಹಾಗೂ ಕಾಮಗಾರಿಗಳನ್ನು ಶೀಘ್ರ ಆರಂಭ ಹಾಗೂ ಪೂರ್ಣಗೊಳಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಸಂಸದ ಡಾ.ಕೆ.ಸುಧಾಕರ್ ನವದೆಹಲಿಯಲ್ಲಿ `ಭೇಟಿ ಮಾಡಿ, ವಿವಿಧ ಯೋಜನೆ ಹಾಗೂ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು. ಚಿಕ್ಕಬಳ್ಳಾಪುರ ಲೋಕಸಭ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸ ರೈಲ್ವೆ ಮಾರ್ಗಗಳ ನಿರ್ಮಾಣ, ಅಂತಿಮ ಸ್ಥಳ ಸಮೀಕ್ಷೆ, ವಿದ್ಯುದೀಕರಣ, ಮೇಲ್ಸೇತುವೆ ಹಾಗೂ ಕೆಳ ಸೇತುವೆಗಳ ನಿರ್ಮಾಣ, ಉಪನಗರ ರೈಲು ಮೊದಲಾದ ಕಾಮಗಾರಿಗಳ ಬಗ್ಗೆ ಸಂಸದ ಡಾ.ಕೆ.ಸುಧಕರ್ ಚರ್ಚಿಸಿ ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿರುವ ಸಚಿವ ವಿ.ಸೋಮಣ್ಣ, ಕಾಮಗಾರಿಗಳ ಸಾಧ್ಯಸಾಧ್ಯಾತೆಗಳ ಕುರಿತು ಚರ್ಚಿಸಲು ರೈಲ್ವೆ ಭವನದಲ್ಲಿ ಇಂದು ಪ್ರತ್ಯೇಕ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಸಂಸದ ಡಾ.ಕೆ.ಸುಧಕರ್ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಇನ್ನು ಚಿಕ್ಕಬಳ್ಳಾಪುರ ಲೋಕಸಭ ಕ್ಷೇತ್ರದಲ್ಲಿ ಇಎಸ್‌ಐ ಆಸ್ಪತ್ರೆ ಮತ್ತು ಎರಡು ಕ್ರೀಡಾಂಗಣಗಳ ನಿರ್ಮಾಣದ ಮಹತ್ವದ ಯೋಜನೆಗಳ ಕನಸು ಶೀಘ್ರದಲ್ಲಾ ನನಸಾಗಲಿದೆ. ಸಂಸದ ಡಾ.ಕೆ.ಸುಧಕರ್ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದನೆ ದೊರೆಯುವ ಜೊತೆಗೆ ಅನುದಾನ ನಿಗದಿ ಮಾಡುವ ಬಗ್ಗೆಯೂ ಭರವಸೆ ಸಿಕ್ಕಿದೆ.

ಚಿಕ್ಕಬಳ್ಳಾಪುರ ಲೋಕಸಭ ಕ್ಷೇತ್ರದಲ್ಲಿ ಇಎಸ್‌ಐ ಆಸ್ಪತ್ರೆ ಮತ್ತು ಎರಡು ಕ್ರೀಡಾಂಗಣಗಳ ನಿರ್ಮಾಣದ ಮಹತ್ವದ ಯೋಜನೆಗಳ ಕನಸು ಶೀಘ್ರದಲ್ಲಾ ನನಸಾಗಲಿದೆ. ಕೇಂದ್ರ ಕಾರ್ಮಿಕ ಮತ್ತು ಕ್ರೀಡಾ ಸಚಿವರಾದ ಮನ್ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿದ ಸಂಸದ ಡಾ.ಕೆ.ಸುಧಕರ್, ಈ ಯೋಜನೆಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದಾರೆ. ಲೋಕ¸ಸಭ ಚುನಾವಣೆ ಸಂಭದಲ್ಲೆ ಇಎಸ್‌ಐ ಆಸ್ಪತ್ರೆ ಬಗ್ಗೆ ಡಾ.ಕೆ.ಸುಧಕರ್ ಜನರಿಗೆ `ಭರವಸೆ ನೀಡಿದ್ದರು.

ಚಿಕ್ಕಬಳ್ಳಾಪುರ ಲೋಕಸಭ ಕ್ಷೇತ್ರದಲ್ಲಿ ಕೈಗಾರಿಕಾ ಪ್ರದೇಶಗಳಿದ್ದು, ಹೆಚ್ಚು ಕಾರ್ಮಿಕರಿದ್ದಾರೆ. ಆದರೆ ಕಾರ್ಮಿಕರಿಗೆ ಸೂಕ್ತ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಕ್ಷೇತ್ರದಲ್ಲಾ ಇಎಸ್‌ಐ ಆಸ್ಪತ್ರೆ ನಿರ್ಮಿಸುವುದರಿಂದ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಕಡಿಮೆ ದರದ ಹಾಗೂ ಉಚಿತ ಚಿಕಿತ್ಸೆ ಸಿಗಲಿದೆ. ಈ ಕುರಿತು ಶೀಘ್ರ ಕ್ರಮ ವಹಿಸಬೇಕೆಂದು ಡಾ.ಕೆ.ಸುಧಕರ್ ಮನವಿ ಮಾಡಿದರು. ಈ ಯೋಜನೆಗೆ ಕೇಂದ್ರ ಸಚಿವರು ಒಪ್ಪಿಗೆ ನೀಡಿದ್ದಾರೆ. ಒಳರೋಗಿಗಳ ಸಂಖ್ಯೆಯ ಆಧರದಲ್ಲಿ ಚಿಕ್ಕಬಳ್ಳಾಪುರ ಲೋಕ¸ಭ ಕ್ಷೇತ್ರದ ಯಾವುದಾದರೂ ಒಂದು ತಾಲೂಕಿನಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ.

ಇದೇ ವೇಳೆ ಕ್ಷೇತ್ರಕ್ಕೆ ಕ್ರೀಡಾಂಗಣಗಳ ಅಗತ್ಯದ ಕುರಿತು ಡಾ.ಕೆ.ಸುಧಕರ್ ಪ್ರಸ್ತಾಪಿಸಿದರು. ಖೇಲೋ ಇಂಡಿಯಾ ಯೋಜನೆಯಡಿ, ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರದಲ್ಲಿ, ಒಟ್ಟು ಎರಡು ಕ್ರೀಡಾಂಗಣ ನಿರ್ಮಿಸಲು ಸಚಿವ ಮನ್ಸುಖ್ ಮಾಂಡವೀಯ ಒಪ್ಪಿಗೆ ನೀಡಿದರು. ಇದಕ್ಕಾಗಿ ವರ್ಷಕ್ಕೆ 10 ಕೋಟಿ ರೂ. ನಂತೆ, ಎರಡು ಕ್ರೀಡಾಂಗಣಗಳಿಗೆ ತಲಾ 50 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

About The Author

Leave a Reply

Your email address will not be published. Required fields are marked *