ಆಧುನಿಕ ಅನುಭವ ಮಂಟಪ’ಕ್ಕೆ ರೂ.50 ಕೋಟಿ ಬಿಡುಗಡೆ – ಸಚಿವ ಈಶ್ವರ ಖಂಡ್ರೆ
1 min readಫೆಬ್ರವರಿ 08: ಬೆಳಗಾವಿ ಲೋಕಸಭಾ ಕ್ಷೇತ್ರ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಇತ್ತ ಕಾಂಗ್ರೆಸ್ ಗೆ ಅಭ್ಯರ್ಥಿ ಆಯ್ಕೆ ಕಸರತ್ತಿಗೆ ಮುಂದಾಗಿದ್ದು, ಕಂದನಗರಿ ಬೆಳಗಾವಿಯನ್ನ ವಶಪಡಿಸಿಕೊಳ್ಳಲು ಬಿಜೆಪಿ ಹಾಗೂ ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸಿದ್ದಾರೆ.ಹೌದು, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇದೀಗ ಫುಲ್ ಆಕ್ಟಿವ್ ಆಗಿದ್ದಾರೆ.
ಇತ್ತ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಲಿ ಸಂಸದೆಯಾಗಿರುವ ಮಂಗಳಾ ಅಂಗಡಿ ಅವರಿಗೆ ಈ ಬಾರೀ ಗೆಲ್ಲುವುಸು ಅನುಮಾನವಾಗಿದ್ದು, ಮಂಗಳಾ ಅಂಗಡಿ ಅವರ ಪುತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ. ಲೋಕಸಭಾ ಚುನಾವಣೆ ಹೊತ್ತಲಿ ಬಿಜೆಪಿಗೆ ಮರಳಿರುವ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಯನ್ನ ಗೆಲ್ಲಿಸುವ ಸಲುವಾಗಿ ಜವಾಬ್ದಾರಿಯನ್ನ ನೀಡಿದೆ ಎಂದು ಹೇಳಲಾಗಿದೆ. ಇತ್ತ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಶೆಟ್ಟರ್ ಅವರು ಬಿಜೆಪಿ ಅಭ್ಯರ್ಥಿ ಎಂಬ ಚರ್ಚೆ ಬಿಜೆಪಿ ಪಾಳಯದಲ್ಲಿ ಹೆಚ್ಚು ಚರ್ಚೆಯಾಗಿತ್ತಿದ್ದು, ಇತ್ತ ಕಾಂಗ್ರೆಸ್ ನಾಯಕರು ಫುಲ್ ಅಲರ್ಟ್ ಆಗಿದ್ದಾರೆ. ಜಗದೀಶ್ ಶೆಟ್ಟರ್ ಅವರ ಸೊಸೆ ಬಿಜೆಪಿ ಅಭ್ಯರ್ಥಿಯಾದರೇ ಕಾಂಗ್ರೆಸ್ ನಿಂದ ಪ್ರಬಲ ಎದುರಾಳಿಯನ್ನು ಕಣಕ್ಕಿಳಿಸಲು ಪಕ್ಷವು ಸತೀಶ್ ಜಾರಕಿಹೊಳಿ ಅಥವಾ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಅವಲಂಬಿತವಾಗಿದೆ ಎಂದು ಮೂಲಗಳು ತಿಳಿಸಿವೆ.ಇನ್ನೂ ಮಾಜಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಹಿರಿಯ ವಕೀಲ ಮೋಹನ್ ಕಾತರಕಿ, ಯುವ ಮುಖಂಡರಾದ ಕಿರಣ್ ಸಾಧುನವರ್, ಡಾ ಗಿರೀಶ್ ಸೋನ್ವಾಲ್ಕರ್ ಮತ್ತು ವಿನಯ್ ನಾವಲಗಟ್ಟಿ ಅವರಂತಹ ನಾಯಕರೊಬ್ಬರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದರು, ಆದರೆ ಇದೀಗ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದು, ಸುರೇಶ್ ಅಂಗಡಿ ಕುಟುಂಬದ ಸದಸ್ಯರೊಬ್ಬರೇ ಬಿಜೆಪಿ ಅಭ್ಯರ್ಥಿಯಾಗಲಿರುವ ಕಾರಣ, ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾಯಿಸಲು ಚಿಂತನೆ ನಡೆಸಿದೆ. ಇಬ್ಬರು ಸಚಿವರ ಪೈಕಿ ಒಬ್ಬರನ್ನ ಲೋಕಸಭಾ ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ಹಿರಿಯ ನಾಯಕರು ಮಾಸ್ಟರ್ ಪ್ಲಾನ್ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತ ಬೆಳಗಾವಿ ಕಾಂಗ್ರೆಸ್ ನಲ್ಲಿ ತಮ್ಮ ಮಕ್ಕಳ ರಾಜಕೀಯವನ್ನ ರೂಪಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಪುತ್ರ ಮೃಣಾಲ್ ಮುಂಬರುವ ಚುನಾವಣೆಯಲ್ಲಿ ಕಣಕ್ಕಿಳಿಸಲು ಪ್ಲಾನ್ ಹಾಕಿಕೊಂಡಿದ್ರು.ಜಗದೀಶ್ ಶೆಟ್ಟರ್‌ಗೆ ಹಾವೇರಿ, ಸವದಿಗೆ ಬಾಗಲಕೋಟೆ: ಲಿಂಗಾಯತರನ್ನು ಸೆಳೆಯಲು ಅಪ್ಪ-ಮಗನ ಮಹಾತಂತ್ರಅಲ್ಲದೇ ಈ ಬಗ್ಗ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ತಮ್ಮ ಪುತ್ರ ಅಥವಾ ಕಾಂಗ್ರೆಸ್ ಹೈಕಮಾಂಡ್ ಯಾರನ್ನೆ ಕಣಕ್ಕಿಲಿಸಿದರೂ ಪಕ್ಷದ ಅಭ್ಯರ್ಥಿಯ ಪರವಾಗಿ ತಾವು ಕೆಲಸ ಮಾಡುವುದಾಗಿ ಹೇಳಿದ್ದಾರೆ, ಆದರೆ ಸಮೀಕ್ಷಾ ವರದಿ ಬಂದ ನಂತರವೇ ಅಂತಿಮ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ. ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಪುತ್ರಿ ಪ್ರಿಯಾಂಕ್ ಜಾರಕಿಹೊಳಿ ಅವರನ್ನ ಬೆಳಗಾವಿಯಿಂದ ಕಣಕ್ಕಿಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ರು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಅಥವಾ ಹೆಬ್ಬಾಳ್ಕರ್ ಕುಟುಂಬದ ಯಾವುದೇ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಇತ್ತ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಲಿಂಗಾಯತ ಅಭ್ಯರ್ಥಿಯನ್ನ ಬಿಜೆಪಿ ಕಣಕ್ಕಿಳಿಸುತ್ತಿದ್ದು, ಕಾಂಗ್ರೆಸ್ ಸಹ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.ಒಟ್ನಲಿ, ಕುಂದನಗರ ಬೆಳಗಾವಿ ಲೋಕಸಭಾ ಕ್ಷೇತ್ರವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಹಲವು ತಂತ್ರ ಹಾಗೂ ಪ್ರತಿತಂತ್ರಗಳನ್ನ ನಡೆಸಿದ್ದು, ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸೊಸೆ ಅಭ್ಯರ್ಥಿಯಾದರೇ, ಕಾಂಗ್ರೆಸ್ ಹೈಕಮಾಂಡ್ ಸತೀಶ್ ಜಾರಕಿಹೊಳಿ ಅವರನ್ನ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿರುವ ಸತೀಶ್ ಜಾರಕಿಹೊಳಿ ಅವರ ನಡೆ ಹೈಕಮಾಂಡ್ ನಾಯಕರ ಮಾತಿನಿಂದ ಬದಲಾಗುತ್ತಾ ಎಂಬುದನ್ನ ಕಾದು ನೋಡ್ಬೇಕಾಗಿದೆ.