ಸಂಪನ್ಮೂಲ ವ್ಯಕ್ತಿಗಳ ವೇತನ ಪಾವತಿಸಲು ಮನವಿ
1 min readಸಂಪನ್ಮೂಲ ವ್ಯಕ್ತಿಗಳ ವೇತನ ಪಾವತಿಸಲು ಮನವಿ
ಎರಡು ತಿಂಗಳ ವೇತನ ಪಾವತಿಗೆ ಆಗ್ರಹಿಸಿ ಮನವಿ
ಗುಡಿಬ0ಡೆ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‌ಎಸ್‌ಎ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿ0ದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ವೇತನ ಪಾವತಿಸಲು ಆಗ್ರಹಿಸಿ ಗುಡಿಬಂಡೆ ಬಿಇಒಗೆ ಮನವಿ ಸಲ್ಲಿಸಿದ ನಂತರ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮಾತನಾಡಿ, ಗುಡಿಬಂಡೆ ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ 14 ಎಸ್‌ಎಸ್‌ಎ ಶಿಕ್ಷಕರಿಗೆ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ 13 ಮಂದಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ವೇತನ ಬಿಡುಗಡೆ ಮಾಡದ ಕಾರಣ ನೌಕರರು ಆರ್ಥಿಕ ಸಂಕಷ್ಟಗಳಿಗೆ ಸಿಲುಕಿದ್ದಾರೆ ಎಂದರು.
ಸಕಾಲಕ್ಕೆ ವೇತನ ಬರದ ಕಾರಣ ಶಿಕ್ಷಕರ ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ, ಆರೋಗ್ಯ ಸೇರಿ ಇತರೆ ಸೌಕರ್ಯಗಳಿಂದ ವಂಚಿರತಾಗುವ0ತಾಗಿದೆ. ರಾಜ್ಯದ ಎಲ್ಲಾ ತಾಲೂಕಿನ ನೌಕರರಿಗೂ ವೇತನ ಪಾವತಿಯಾಗಿದೆ. ಆದರೆ ಗುಡಿಬಂಡೆ ತಾಲೂಕಿನಲ್ಲಿ ಮಾತ್ರ ಪಾವತಿ ಆಗದೇ ಇರುವುದರಿಂದ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಆದ್ದರಿಂದ ಕೂಡಲೇ ಅವರಿಗೆ ವೇತನ ಬಿಡುಗಡೆ ಮಾಡಬೇಕೆಂದರು.
ನೌಕರರ ಸಂಘದಿ0ದ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತ್ಯೇಕವಾಗಿ ಮನವಿ ಸ್ವೀಕರಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಶಿಕ್ಷಕರಿಗೆ ಕೂಡಲೇ ವೇತನ ಬಿಡುಗಡೆಗೆ ಕ್ರಮವಹಿಸುತ್ತೇನೆಂದು ಆಶ್ವಾಸನೆ ನೀಡಿದರು. ಈ ವೇಳೆ ನೌಕರರ ಸಂಘದ ಕಾರ್ಯದರ್ಶಿ ಮುನಿಕೃಷ್ಣ, ನಿರ್ದೇಶಕ ಕೃಷ್ಣಪ್ಪ, ಶ್ರೀರಾಮರೆಡ್ಡಿ, ಸುಮಿತ್ರ, ಶ್ರೀರಾಮಪ್ಪ, ಪಿ.ಎನ್.ರಾಜಶೇಖರ್ ಇದ್ದರು.