ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆಕ್ರೋಶ

ನಾಳೆ ನಡೆಲಿದೆಯೇ ನಗರಸಭೆ ಅಂಗಡಿಗಳ ಹರಾಜು

ಊರದೇವತೆ ಜಾಲಾರಿ ಗಂಗಮಾAಬದೇವಿ ಕರಗಮಹೋತ್ಸವ

ಚಿಕ್ಕಕಾಡಿಗೇನಹಳ್ಳಿಯಲ್ಲಿ ಅದ್ಧೂರಿ ಅಂಬೇಡ್ಕರ್ ಜಯಂತಿ

April 17, 2025

Ctv News Kannada

Chikkaballapura

37ನೇ ವಸಂತಕ್ಕೆ ಕಾಲಿಟ್ಟ ರಾಕಿಂಗ್ ಸ್ಟಾರ್ ಯಶ್​; ಜನ್ಮದಿನಕ್ಕೆ ಹರಿದುಬಂತು ಗಣ್ಯರಿಂದ ಶುಭಾಶಯಗಳ ಮಹಾಪೂರ

1 min read

ಇಡೀ ಭಾರತ ಚಿತ್ರರಂಗವೇ ಸ್ಯಾಂಡಲ್​ವುಡ್​ನತ್ತ ತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್​, ಪ್ಯಾನ್ ಇಂಡಿಯಾ ನಟ ಯಶ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ನಟನ ಜನ್ಮದಿನದ ಬೆನ್ನಲ್ಲೇ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರು ಶುಭಾಶಯಗಳು ತಿಳಿಸಿದ್ದಾರೆ.

‘ಮೊಗ್ಗಿನ ಮನಸ್ಸು’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಯಶ್​, ತದನಂತರ ಹಲವಾರು ಸಿನಿಮಾಗಳಲ್ಲಿ ಮಿಂಚುವ ಮೂಲಕ ಕನ್ನಡ ಸಿನಿಪ್ರೇಕ್ಷಕರಲ್ಲಿ ತಮ್ಮ ಹೆಸರನ್ನು ದಾಖಲಿಸಿದರು. ಪ್ರಶಾಂತ್ ನೀಲ್​ ನಿರ್ದೇಶನದ ‘ಕೆಜಿಎಫ್​’ನಲ್ಲಿ ಅಬ್ಬರಿಸಿದ ಯಶ್​, ಇಡೀ ವಿಶ್ವವೇ ಬೆರಗಾಗುವಂತೆ ಮಾಡಿದರು. ಇದೀಗ ಜಗತ್ತಿನ ಸೂಪರ್​ಸ್ಟಾರ್​ ನಟರ ಪೈಕಿ ರಾಕಿಂಗ್ ಸ್ಟಾರ್​ ಕೂಡ ಪ್ರಮುಖರು ಎಂಬುದು ಕನ್ನಡಿಗರಿಗೆ ದುಪ್ಪಟ್ಟು ಸಂತಸ.

ಚಿತ್ರರಂಗದಲ್ಲಿ ಇತಿಹಾಸ ನಿರ್ಮಿಸಿದ ‘ಕೆಜಿಎಫ್​’ಗೆ ಸಿಕ್ಕ ಅಪಾರ ಮನ್ನಣೆ ಬಳಿಕ ಯಶ್​ ಮೇಲೆ ಭಾರೀ ನಿರೀಕ್ಷೆಗಳು ಹುಟ್ಟಿಕೊಂಡಿದ್ದು, ಇತ್ತೀಚೆಗೆ ತಮ್ಮ ಮುಂದಿನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ​ ಬಗ್ಗೆ ಅಧಿಕೃತವಾಗಿ ಮಾಹಿತಿ ಕೂಡ ನೀಡಿದರು. ಮತ್ತೊಂದು ಪ್ಯಾನ್​ ಇಂಡಿಯಾ ಚಿತ್ರ ಘೋಷಿಸಿದ ಯಶ್​, ಮಲಯಾಳಂ ಚಿತ್ರರಂಗದ ನಿರ್ದೇಶಕಿ ಗೀತು ಮೋಹನ್‌ ದಾಸ್‌ ಅವರೊಟ್ಟಿಗೆ ಕೈಜೋಡಿಸಿರುವುದು ಸದ್ಯ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ. ಇದರೊಟ್ಟಿಗೆ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ಕೂಡ ಟ್ವೀಟ್​ ಮುಖೇನ ಯಶ್​ ಜನ್ಮದಿನಕ್ಕೆ ಶುಭಕೋರಿದ್ದಾರೆ.

https://youtube.com/@ctvnewschikkaballapura?si=C-CJWuVfM-65JQMa
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *