ಚಿಕ್ಕಬಳ್ಳಾಪುರದ ಗಾಂಧಿ ಭವನ ವೀಕ್ಷಿಸಿದ ಶಾಲಾ ಮಕ್ಕಳು
1 min readಚಿಕ್ಕಬಳ್ಳಾಪುರದ ಗಾಂಧಿ ಭವನ ವೀಕ್ಷಿಸಿದ ಶಾಲಾ ಮಕ್ಕಳು
ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಗಾಂಧಿ ಪರಿಚಯ
ರಾಷ್ಟಿಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಸರ್‌ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಪುಸ್ತಕ ಪ್ರದರ್ಶನ, ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲಾ ಮಕ್ಕಳು ಆಗಮಿಸಿದ್ದು, ಅವರು ಗಾಂಧಿ ಭವನ ವೀಕ್ಷಿಸಿ ಆನಂದಿಸಿದರು.
ರಾಷ್ಟಿಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ ಸರ್‌ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಪುಸ್ತಕ ಪ್ರದರ್ಶನ, ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ನಗರದ ಚಾಮರಾಜಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 32 ವಿದ್ಯಾರ್ಥಿಗಳು, ಗೊಳ್ಳುಚಿನ್ನಪ್ಪನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳು ಮತ್ತು ಚಿಕ್ಕಬಳ್ಳಾಪುರ ನಗರದ ವಾಪಸಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 150 ವಿದ್ಯಾರ್ಥಿಗಳು ಗಾಂಧಿ ಭವನಕ್ಕೆ ಭೇಟಿ ನೀಡಿ ಗಾಂಧೀಜಿಯವರ ಜೀವನ ಚರಿತ್ರೆ ಕುರಿತು ಅಳವಡಿಸಿದ ಗ್ಯಾಲರಿ ವೀಕ್ಷಿಸಿ, ಗಾಂಧೀಜಿಯವರ ಜೀವನ ಚರಿತ್ರೆ ತಿಳಿದರು.
ಈ ಸಂದರ್ಭದಲ್ಲಿ ಚಾಮರಾಜಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ವೆಂಕಟಲಕ್ಷಮ್ಮ, ಗೊಳ್ಳುಚಿನ್ನಪ್ಪನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಳ, ವಾಪಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪಿ.ವಿ. ನೂತನ, ಟಿ.ಜಿ. ಗಿರಿಜಾದೇವಿ ಹಾಜರಿದ್ದರು.