ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ಮಕ್ಕಳ ಜ್ಞಾನಕ್ಕೆ ವಿಜ್ಞಾನ, ಗಣಿತ ಮೇಳ ಸಹಕಾರಿ  ನವೋದಯ ಶಾಲೆಯಲ್ಲಿ ತಾಲ್ಲೂಕು ಮಟ್ಟದ ವಸ್ತು ಪ್ರದರ್ಶನ.

1 min read

ಮಕ್ಕಳ ಜ್ಞಾನಕ್ಕೆ ವಿಜ್ಞಾನ, ಗಣಿತ ಮೇಳ ಸಹಕಾರಿ  ನವೋದಯ ಶಾಲೆಯಲ್ಲಿ ತಾಲ್ಲೂಕು ಮಟ್ಟದ ವಸ್ತು ಪ್ರದರ್ಶನ.

 

ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಿಜ್ಞಾನ, ಗಣಿತ ವಿಷಯಗಳತ್ತ ಆಕರ್ಷಿಸಿ ಸಂಶೋಧನೆ ಕೈಗೊಳ್ಳಲು ಉತ್ತೇಜಿಸಲು ಶಿಕ್ಷಣ ಇಲಾಖೆ ಆಶ್ರಯದಲ್ಲಿ ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದು ನವೋದಯ ವಿದ್ಯಾನಿಕೇತನ ಆಡಳಿತ ಮಂಡಳಿ ಅಧ್ಯಕ್ಷ ವೀರೆಗೌಡ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಶಿವಪುರ ಗ್ರಾಮದ ನವೋದಯ ವಿದ್ಯಾನಿಕೇತನ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ,ಗಣಿತ ವಸ್ತು ಪ್ರದರ್ಶನದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಲದು, ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷಣದ ಬಗ್ಗೆ ಅಭಿರುಚಿ ಬೆಳೆಸುವುದು ಅವಶ್ಯಕ. ಎಂದರು.

ವಿಜ್ಞಾನ ಮೇಳ ಮಕ್ಕಳ ಪ್ರತಿ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿ ಮಾರ್ಪಾಡಾಗಿರುವುದು ನಿಜಕ್ಕೂ ಸಂತಸ. ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗದಲ್ಲಿ ಮಕ್ಕಳು ಅಂಕಗಳಿಸುವ ಯಂತ್ರಗಳಾಗಿ ಬೆಳೆಯುತ್ತಿದ್ದಾರೆ. ಇಂತಹ ಮೇಳಗಳು ಮಕ್ಕಳ ಬೆಳವಣಿಗೆಗೆ ಪೂರಕವಾಗುತ್ತದೆ. ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಪ್ರಯೋಜನವಿಲ್ಲ. ಜ್ಞಾನಕ್ಕೂ ವಿಸ್ತರಿಸಿದಾಗ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಬರುತ್ತದೆ ಎಂದರು.

ತಾಲೂಕಿನ ವಿವಿಧ ಶಾಲೆಯಿಂದ ೧,೫೦೦ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳು, ಪ್ರಯೋಗಗಳಲ್ಲಿ ತೊಡಗುವ ಮೂಲಕ ವೈಜ್ಞಾನಿಕ ಕ್ಷೇತ್ರದಲ್ಲಿನ ಬೆಳವಣಿಗೆಗಳ ಬಗ್ಗೆ ಕುತೂಹಲದಿಂದ ತಿಳಿದುಕೊಂಡರು. ಈ ವೇಳೆ ಶಿಕ್ಷಕರಾದ ವೀರೇಗೌಡ, ಭವ್ಯ, ಮಹೇಸ್ ಇದ್ದರು.

►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura

About The Author

Leave a Reply

Your email address will not be published. Required fields are marked *