ಬೇವಿನಹಳ್ಳಿ ಗ್ರಾಪಂ ಶಾಸಕರ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ
1 min readಬೇವಿನಹಳ್ಳಿ ಗ್ರಾಪಂ ಶಾಸಕರ ಬೆಂಬಲಿತ ಅಭ್ಯರ್ಥಿಗಳ ಆಯ್ಕೆ
ರತ್ನಮ್ಮ ವೆಂಕಟೇಶಪ್ಪ ಅಧ್ಯಕ್ಷರಾಗಿ, ನರಸಿಂಹಮೂರ್ತಿ ಉಪಾಧ್ಯಕ್ಷರಾಗಿ ಆಯ್ಕೆ
ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನಮ್ಮ ವೆಂಕಟೇಶಪ್ಪ, ಉಪಾಧ್ಯಕ್ಷರಾಗಿ ನರಸಿಂಹಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಿಡಿಪಿಒ ಹಾಗೂ ಚುನಾವಣಾಧಿಕಾರಿ ರವಿಕುಮಾರ್ ಘೋಷಿಸಿದರು.
ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಪುಟ್ಟಸ್ವಾಮಿಗೌಡರ ಬಣ ಜಯಗಳಿಸಿದೆ. ಈ ವೇಳೆ ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಗೌಡ ಮಾತನಾಡಿ, ಶಾಸಕ ಪುಟ್ಟಸ್ವಾಮಿ ಗೌಡರ ಮಾರ್ಗದರ್ಶನದಂತೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದ ಪಂಚಾಯಿತಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಹೇಳಿದರು.
ನೂತನ ಅಧ್ಯಕ್ಷೆ ರತ್ನಮ್ಮ ವೆಂಕಟೇಶಪ್ಪ ಮಾತನಾಡಿ, ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿಗೆ ಮೂಲ ಸೌಕರ್ಯ ಒದಗಿಸಲು ಈ ಹಿಂದೆಯಿ0ದಲೂ ಅಧ್ಯಕ್ಷ, ಉಪಾಧ್ಯಕ್ಷರ ಹಾದಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಂಚಾಯಿತಿಯನ್ನು ಎಲ್ಲಾ ಸದಸ್ಯರ ಒಗ್ಗಟ್ಟಿನಿಂದ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕೆಲಸ ಮಾಡುತ್ತೇವೆ ಎಂದರು.
ಅಧ್ಯಕ್ಷ, ಉಪಾಧ್ಯಕ್ಷರಿಗೆ ಮುಖಂಡರು ಹಾಗೂ ಕಾರ್ಯಕರ್ತರು ಹೂಮಾಲೆ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಾಜಿ ರಾವ್, ರೇವಣಸಿದ್ಧೇಶ್ವರ, ತೇಜಸ್ವಿನಿ ಲಕ್ಷ್ಮೀ ನಾರಾಯಣ, ಮಾಜಿ ಉಪಾಧ್ಯಕ್ಷ ಲಕ್ಷ್ಮೀದೇವಿ ಇದ್ದರು.