ನಟ ದರ್ಶನ್ ಪರ ವಾದಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ನೇಮಕ
1 min readರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಪರ ವಾದಿಸಲು ಹಿರಿಯ ವಕೀಲ ಸಿ.ವಿ. ನಾಗೇಶ್ ಅವರನ್ನು ನೇಮಿಸಲಾಗಿದೆ.
ನಟ ದರ್ಶನ್ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ವಕೀಲ ರಾಘವೇಂದ್ರ ಅವರು ಸಿದ್ದತೆ ನಡೆಸಿದ್ದು, ಈ ನಡುವೆ ಕೋರ್ಟ್ ನಲ್ಲಿ ದರ್ಶನ್ ಪರ ವಾದ ಮಂಡಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಈಗಾಗಲೇ ವಕೀಲ ರಾಘವೇಂದ್ರ ಅವರು ನಾಗೇಶ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಕೊಲೆ ಪ್ರಕರಣದಿಂದ ಪಾರಾಗಲು ಹಾಗೂ ಸಾಕ್ಷ್ಯ ನಾಶ ಮಾಡಲು 40 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.