ಅಂಕಪಟ್ಟಿ ವಿತರಿಸಲು ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ
1 min readಅಂಕಪಟ್ಟಿ ವಿತರಿಸಲು ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ
ಶ್ರೀನಿವಾಸಪುರದಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಹೋರಾಟ
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕ ಪಟ್ಟಿ ವಿತರಿಸುವಂತೆ ಒತ್ತಾಯಿಸಿ ಎಸ್‌ಎïಐ ಇಂದು ಪ್ರತಿಭಟನೆ ನಡೆಸಿತು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಎಸ್‌ಎಐ ಸಮಿತಿಯಿಂದ ತಾಲೂಕು ದಂಡಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕ ಪಟ್ಟಿ ವಿತರಿಸುವಂತೆ ಒತ್ತಾಯಿಸಿ ಎಸ್‌ಎಐ ಶ್ರೀನಿವಾಸಪುರದಲ್ಲಿ ಇಂದು ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಎಸ್ ಎ ಐ ಜಿಲ್ಲೆ ಕಾರ್ಯದರ್ಶಿ ಸುರೇಶ್ ಬಾಬು ಮಾತಾನಾಡಿ, ರಾಜ್ಯದಲ್ಲಿ ಸುಮಾರು 22 ಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು, ಸುಮಾರು ೫೧ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆ ಮಾಡಿಲ್ಲ ಎಂದು ಆರೋಪಿಸಿದರು.
ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ ಎನ್‌ಇಪಿ ರದ್ದುಗೊಳಿಸಿ ಎಸ್‌ಇಪಿ ಜಾರಿಗೋಳಿಸಿದೆ. ಆದರೆ ಎಸ್‌ಇಪಿ ವಿದ್ಯಾರ್ಥಿಗಳಿಗೂ ಅಂಕಪಟ್ಟಿ ಸಿಗುತ್ತಿಲ್ಲ. ಉನ್ನತ ವಿದ್ಯಾಭ್ಯಾಸಕ್ಕೆ ಅಂಕ ಪಟ್ಟಿ ಬೇಕಾಗಿರುವ ಕಾರಣ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ವಿಶ್ವವಿದ್ಯಾನಿಲಯದ ಬಳಿ ವಿದ್ಯಾರ್ಥಿಗಳು ಅಂಕಪಟ್ಟಿ ಕೇಳಿಕೊಂಡು ಹೋದರೆ ಡಿಜಿ ಲಾಕರ್‌ನಲ್ಲಿ ಅಂಕಪಟ್ಟಿ ತೆಗೆದುಕೊಳ್ಳಿ ಎಂದು ತಿಳಿಸುತ್ತಿದ್ದಾರೆ. ಆದರೆ ಡಿಜಿ ಲಾಕರ್‌ನಲ್ಲಿಯೂ ಅಂಕಪಟ್ಟಿ ಸಿಗುತ್ತಿಲ್ಲ ಎಂದು ಅಳವತ್ತುಕೊಂಡರು.
ವಿದ್ಯಾರ್ಥಿಗಳು ಕೇಳಿದರೆ ತಾಂತ್ರಿಕ ಸಮಸ್ಯೆ ಇದೆ ಎಂದು ತಿಳಿಸುತ್ತಾರೆ. ಈ ಸಮಸ್ಯೆಎಸ್‌ಇಪಿ ಜಾರಿಗೆ ಬಂದ ದಿನದಿಂದ ಎದುರಾಗಿದೆ. ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮಸ್ಯೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗುತ್ತಿದೆ ಎಂದರು.