ಶಿಡ್ಲಘಟ್ಟ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರ ನೇಮಕ
1 min read
ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರ ನೇಮಕ ರಾಜುಗೌಡ ಅವರಿಂದ ಆದೇಶ ಪತ್ರ ವಿತರಣೆ
ಶಿಡ್ಲಘಟ್ಟ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಕುರುಬರಪೇಟೆಯ ರಮೇಶ್ ರನ್ನು ನೇಮಕ ಮಾಡಿ ರಾಜೀವ್‌ಗೌಡ ಆದೇಶ ಪತ್ರ ವಿತರಿಸಿದರು.
ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಬೇಕು. ಪಕ್ಷವನ್ನು ತಳಮಟ್ಟದಿಂದ ಇನ್ನಷ್ಟು ಸಂಘಟಿಸಲು ಎಲ್ಲ ಕಾರ್ಯಕರ್ತರು ಮುಖಂಡರು ಶ್ರಮಿಸಬೇಕಿದೆ ಎಂದು ಕೆಪಿಸಿಸಿ ಕೋ ಆರ್ಡಿನೇಟರ್ ರಾಜೀವ್‌ಗೌಡ ತಿಳಿಸಿದರು.
ಶಿಡ್ಲಘಟ್ಟದಲ್ಲಿನ ಎಬಿಡಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದ್ದು, ಕಾರ್ಯಕರ್ತರು ದೃತಿಗೆಡಬೇಕಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮತದಾರರು ಹಾಗೂ ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಎಂ.ರಮೇಶ್, ಟಿ.ಕೆ. ನಟರಾಜ್, ನಗರಸಭೆ ಸದಸ್ಯ ಎಲ್. ಅನಿಲ್‌ಕುಮಾರ್, ಗಫೂರ್, ಶ್ರೀನಿವಾಸ್, ಮೌಲಾ, ನರೇಂದ್ರ ಇದ್ದರು.