ಶಿಡ್ಲಘಟ್ಟ ತಾಲೂಕಿನ ೪ ಗ್ರಾಪಂ ಚುನಾವಣೆ ಘೋಷಣೆ
1 min readಶಿಡ್ಲಘಟ್ಟ ತಾಲೂಕಿನ ೪ ಗ್ರಾಪಂ ಚುನಾವಣೆ ಘೋಷಣೆ
ಉತ್ಸಾಹದಿಂದ ನಾಮಪತ್ರ ಸಲ್ಲಿಸುತ್ತಿರುವ ಅಭ್ಯಥಿಗಳು
ಶಿಡ್ಲಘಟ್ಟದಲ್ಲಿ ಪಾನೆಯಾಗದ ಬಿಜೆಪಿ, ಜೆಡಿಎಸ್ ಮೈತ್ರಿ
ಶಿಡ್ಲಘಟ್ಟ ತಾಲೂಕಿನ ೪ ಗ್ರಾಮ ಪಂಚಾಯಿತಿಗಳ 48 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಅಭ್ಯರ್ಥಿಗಳು ಉತ್ಸಾಹದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಬಿಜೆಪಿ, ಜೆಡಿಎಸ್ ನಡುವೆ ಮೈತ್ರಿ ಇಲ್ಲಿ ಕಾರ್ಯನಿರ್ವಹಿಸದಿರುವುದು ವಿಶೇಷವಾಗಿದೆ.
ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ, ಹೊಸಪೇಟೆ, ನಾಗಮಂಗಲ, ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗಳ 48 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ವಿವಿಧ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ತಮ್ಮ ಪಕ್ಷದ ಮುಖಂಡರೊ0ದಿಗೆ ಗ್ರಾಮ ಪಂಚಾಯಿತಿ ಕೇಂದ್ರಕ್ಕೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಗ್ರಾಮ ಪಂಚಾಯಿತಿ ಕೇಂದ್ರಗಳ ಮುಂದೆ ಜಮಾಯಿಸಿ ನಾಮಪತ್ರ ಸಲ್ಲಿಸಲು ಅಗತ್ಯ ಮಾರ್ಗದರ್ಶನದ ಜೊತೆಗೆ ಬೆಂಬಲ ಸೂಚಿಸಿದರು.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಧರ್ಮ ಪಾಲಿಸುತ್ತಿದ್ದರೆ, ವಿಧಾನಸಭ ಕ್ಷೇತ್ರದಲ್ಲಿ ಮಾತ್ರ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತರು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಬಿಜೆಪಿ ಗ್ರಾಮಂತರ ಮಂಡಲ ಅಧ್ಯಕ್ಷ ಆನಂದ್‌ಗೌಡ ಮಾತನಾಡಿ, ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಜೆಡಿಎಸ್ ಮುಖಂಡರೊ0ದಿಗೆ ಚರ್ಚಿಸಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗುವುದು ಎಂದರು.
ಕಾ0ಗ್ರೆಸ್ ಮುಖಂಡ ಕೆ. ಗುಡಿಯಪ್ಪ ಮಾತನಾಡಿ, ರಾಜ್ಯದ ಮೂರು ವಿಭಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉತ್ಸಾಹದಿಂದ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಸಾಧನೆಗಳು ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಹೊಸಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ, ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಚ್‌ಎಂ ಮುನಿಯಪ್ಪ, ಈರೇಬಲ್ಲ ಅಶ್ವತ್, ಕೃಷ್ಣಪ್ಪ ಇದ್ದರು.