ಶಿವಮೊಗ್ಗ ಹೋರಿ ಹಬ್ಬ; ಗೂಳಿ ತಿವಿತಕ್ಕೆ ಪ್ರಾಣ ಕಳೆದುಕೊಂಡ ಯುವಕ
1 min readಹೋರಿ ಹಬ್ಬ ವೀಕ್ಷಿಸಲು ತೆರಳಿದ್ದ ಯುವಕ ಹೋರಿ ತಿವಿದು ಮೃತಪಟ್ಟಿದ್ದಾನೆ. ಈ ಘಟನೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ಪುನೀತ್ ಆಚಾರ್ (19) ಮೃತ ಯುವಕ. ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿಯಾಗಿದ್ದಾನೆ.ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ಹೋಗಿದ್ದ ಪುನೀತ್ ಆಚಾರ್ ಹೋಗಿದ್ದ.
ಈ ವೇಳೆ ಆತನಿಗೆ ಹೋರಿ ತಿವಿದಿದೆ. ಹೋರಿ ತಿವಿತದಿಂದ ಕುಸಿದುಬಿದ್ದ ಆತನನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದು ತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಶಿಕಾರಿಪುರ ಪಟ್ಟಣದಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ಆತ ಸೋಮವಾರ ಕಲ್ಮನೆಯಲ್ಲಿ ಹೋರಿ ಸ್ಪರ್ಧೆ ವೀಕ್ಷಿಸಲು ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ಪುನೀತ್ ತಂದೆ ಗಜೇಂದ್ರ ಆಚಾರ್ ಹೋರಿ ಆಯೋಜಕರ ವಿರುದ್ಧ ಕ್ರಮ ಜರುಗಿಸುವಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಶಿಕಾರಿಪುರ ತಾಲೂಕಿನಲ್ಲಿ ಹೋರಿ ಹಬ್ಬಕ್ಕೆ ಇದು ಎರಡನೇ ಬಲಿಯಾಗಿದ್ದು ಜನವರಿಯಲ್ಲಿ ಹೋರಿ ಹಬ್ಬ ನೋಡಲು ಹೋದ ತರಲಘಟ್ಟದ ಯುವಕ ಮೃತಪಟ್ಟಿದ್ದಾನೆ
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/