ವಿಜೃಂಭಣೆಯಿಂದ ನಡೆದ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
1 min readನಂಜನಗೂಡು ತಾಲೂಕಿನ ದೊಡ್ಡಕವಲಂದೆ ಹೋಬಳಿಯ ಕಾರ್ಯ ಗ್ರಾಮದ ಪ್ರಸಿದ್ಧ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜಂಭಣೆ ಯಿಂದ ಜರುಗಿತು.
ಪ್ರತಿ ವರ್ಷ ದೀಪಾವಳಿ ಹಬ್ಬದ ಮರುದಿನ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತದೆ. ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಜನರು ಜಾತ್ರೆಯ ಪ್ರಮುಖ ಆಕರ್ಷಣೆಯಾದ ರಥವನ್ನು ಬೆಟ್ಟದ ಮೇಲಕ್ಕೆ ಹೊತ್ತೊಯ್ದು ಸಂಭ್ರಮಿಸಿದರು.
ಸಾವಿರಾರು ಜನರು ಜಾತ್ರೆಯ ವೈಭವವನ್ನು ಕಣ್ತುಂಬಿಕೊAಡರು.
ನವ ವಿವಾಹಿತರು ಹಣ್ಣು-ಜವನ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಜಾತ್ರೆಯ ಪ್ರಯುಕ್ತ ಗ್ರಾಮದ ಹೊರ ವಲಯದಲ್ಲಿರುವ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಬೆಳಗಿನ ಜಾವ ೪ರಿಂದಲೇ ಧಾರ್ಮಿಕ ಪೂಜಾ ಕೈಕಾರ್ಯಗಳು ಆರಂಭಗೊAಡಿದ್ದವು.
ಸಿದ್ದೇಶ್ವರಸ್ವಾಮಿ ದೇವಾಲಯದ ಅರ್ಚಕರ ಮನೆಯಿಂದ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಬೆಟ್ಟದ ಮೇಲಕ್ಕೆ ಹೊತ್ತು ತಂದು ಪೂಜೆ ಸಲ್ಲಿಸಲಾಯಿತು.
ನಂತರ ದೇವಾಲಯದ ಹೊರ ಆವರಣದಲ್ಲಿ ಹುಲಿವಾಹನ ಸಮೇತ ಸಿದ್ಧೇಶ್ವರ ಸ್ವಾಮಿಯವರ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು.
ಇನ್ನು ಜಾತ್ರೆಯ ಪ್ರಮುಖ ಆಕರ್ಷಣೆಯಾದ ಅಲಂಕೃತ ರಥವನ್ನು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಟಾಪಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಉತ್ಸವ ಮೂರ್ತಿ ಸಾಗುವ ಮಾರ್ಗದುದ್ದಕ್ಕೂ ಬಣ್ಣ ಬಣ್ಣದ ರಂಗೋಲಿಗಳನ್ನು ಹಾಕಿ ರಸ್ತೆ ಬದಿಯಲ್ಲಿ ತಳಿರು ತೋರಣಗಳನ್ನು ಕಟ್ಟಿ ಜನರು ಮೆರವಣಿಗೆಯನ್ನು ಸ್ವಾಗತಿಸಿದರು.