ಗೃಹಜ್ಯೋತಿ ನಿಯಮದಲ್ಲಿ ಮಹತ್ವದ ಬದಲಾವಣೆ; ಏನದು
1 min readಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಶೇ.10ರಷ್ಟು ಬದಲು 10 ಯೂನಿಟ್ ಫ್ರೀ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ. ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ.
ಸೆಂಟ್ರಲ್ ಇಆರ್ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ.
ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಧರಿಸಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ ಇದೀಗ 4450 ಕೋಟಿ ರೂ. ಸಾಲಕ್ಕೆ ಖಾತರಿ ನೀಡಲು ತೀರ್ಮಾನಿಸಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura