ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಸೋರುತಿಹುದು ಶಾಲೆ ಮಾಳಿಗೆ: ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಪ್ರಾಣಕ್ಕೆ ಸಂಚಕಾರವಾದ ಜ್ಞಾನದೇಗುಲ

1 min read
 ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಹೀಗಾಗಿ ಅವರಿಗೆ ಶಿಕ್ಷಣ ಅತ್ಯಗತ್ಯ. ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಪೋಷಕರ ಕರ್ತವ್ಯ. ಆದರೆ ಕೆಲವೆಡೆ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಹಿಂದೇಟಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಾರಣ ಶಾಲೆಯಲ್ಲಿನ ಅವ್ಯವಸ್ಥೆಗಳು.
ಚಿಕ್ಕಬಳ್ಳಾಪುರದ ಈ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಹಿಂಜರಿಯುತ್ತಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತಿ ಕಚೇರಿಯಿಂದ ಕೂಗಳತೆ ದೂರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅವರಣದಲ್ಲಿರುವ ಒಂದು ಹಳೆಯ ಕೊಠಡಿ ಬಳಕೆಗೆ ಯೋಗ್ಯವಿಲ್ಲ. ಹಾಗಾಗಿ ಅದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟವರ ಗಮನಕ್ಕೆ ತಂದು ಮನವಿ ಪತ್ರಗಳನ್ನು ಕೊಟ್ಟು ವರ್ಷಗಳು ಕಳೆದರು ಯಾರಿಂದಲೂ ಪ್ರತಿಕ್ರಿಯೆ ಬಂದಿಲ್ಲ. ಇದರಿಂದಾಗಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟಾಕುತ್ತಿರುವುದು ಕಂಡುಬಂದಿದೆ. ಜೊತೆಗೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನದ ಬಿಸಿ ಊಟ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಸಿ ಬಡಿಸುವ ಅಡುಗೆ ಕೋಣೆಯ ಮೇಲ್ಚಾವಣಿಯ ಗಾರೆ ಉದುರುತ್ತಿದ್ದೂ, ಮಳೆ ಬಂದ್ರೆ ಸೋರುವ ಹಾಗೂ ಯಾವ ಸಮಯದಲ್ಲಿ ಆದರೂ ಕುಸಿಯುವ ಭೀತಿಯಲ್ಲಿ ಅಡುಗೆ ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರು ಕೆಲಸ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಹಾಗೂ ಶಾಸಕರಿಗೆ ಮನವರಿಕೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪೋಷಕರು ದೂರಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರು ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಬಗ್ಗೆ ಮಾತನಾಡುತ್ತಾರೆ, ಆದರೆ ಇಲ್ಲಿನ ಸರಕಾರಿ ಶಾಲೆಗೆ ಒಮ್ಮೆ ಭೇಟಿ ನೀಡಿದರೆ ಇಲ್ಲಿನ ಸಮಸ್ಯೆ ಅನಾವರಣಗೊಳ್ಳುತ್ತದೆ. ಇರುವುದು ಒಂದೇ ಕೊಠಡಿಯಲ್ಲಿ ಶಾಲೆಯಲ್ಲಿರುವ 1ರಿಂದ 5ನೇ ತರಗತಿ ಮಕ್ಕಳಿಗೆ ಪಾಠ ಮಾಡುವ ಸ್ಥಿತಿ ಒದಗಿ ಬಂದಿದೆ. ಹೀಗಿದ್ದಾಗ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಹೇಗೆ ಸಾಧ್ಯ ಎಂಬುದು ಪೋಷಕರ ಪ್ರಶ್ನೆಯಾಗಿದೆ. ಮತ್ತೊಂದು ಕಡೆ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿಸುವ ಅಡುಗೆ ಕೋಣೆಯ ಮೇಲ್ಚಾವಣಿಯ ಸಿಮೆಂಟ್ ಉದುರುತ್ತಿದ್ದೂ ಪ್ರಾಣದ ಹಂಗು ತೊರೆದು ಈ ಅಡುಗೆ ಕೋಣೆಯಲ್ಲಿ ಸಿಬ್ಬಂದಿ ಕೆಲಸ ಮಾಡುವಂತಾಗಿದ್ದು, ಯಾವುದೇ ಕೆಟ್ಟ ಘಟನೆಗಳಿಗೆ ಸಾಕ್ಷಿಯಾಗುವ ಮುನ್ನ ಶಾಲೆಯ ಅವರಣದಲ್ಲಿರುವ ಬಳಕೆಗೆ ಯೋಗ್ಯವಲ್ಲದ ಕೋಠಡಿಯನ್ನು ತೆರವುಗೊಳಿಸಿ ಕೂಡಲೇ ಅಡುಗೆ ಕೋಣೆಯ ಮೇಲ್ಚಾವಣಿಯನ್ನು ರಿಪೇರಿ ಮಾಡಬೇಕೆಂದು ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಅಗ್ರಹವಾಗಿದೆ. ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮಪಟ್ಟಣ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಮಕ್ಕಳ ಗ್ರಾಮ ಸಭೆಯಲ್ಲೂ ಸಹ ಈ ಕುರಿತು ವಿದ್ಯಾರ್ಥಿಗಳು ಆತಂಕವನ್ನು ವ್ಯಕ್ತಪಡಿಸಿದ್ದರು, ಅಂದು ಅಧಿಕಾರಿಗಳು ಒಂದು ವಾರದೊಳಗೆ ಸರಿಪಡಿಸುವ ಭರವಸೆ ನೀಡಿದ್ದರು ಆದರೆ ಒಂದು ತಿಂಗಳು ಕಳೆದರು ಇದುವರೆಗೂ ಅಧಿಕಾರಿಗಳು ಮಾತ್ರ ಅತ್ತ ತಿರುಗಿಯೂ ನೋಡಿಲ್ಲ ಎಂಬುದು ಪೋಷಕರ ಆರೋಪವಾಗಿದೆ.

About The Author

Leave a Reply

Your email address will not be published. Required fields are marked *