ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

1 min read

ಮಹಿಳೆರ ಮೇಲಿನ ದೌರ್ಜನ್ಯ ನಿಲ್ಲಬೇಕು
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ದೌರ್ಜನ್ಯ ನಿಲ್ಲಬೇಕು

ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯ ನೀಡುವ ಜೊತೆಗೆ ಪ್ರತಿಯೊಬ್ಬ ಮಹಿಳೆಯನ್ನು ತಾಯಿ, ಸಹೋದರಿಯಂತೆ ಗೌರವಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ರಾಷ್ಟಿಯ ಮಹಿಳಾ ಆಯೋಗ, ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭಾವನದ ಸರ್. ಎಂ ವಿಶ್ವೇಶ್ವರಯ್ಯ ಸಭಾ0ಗಣದಲ್ಲಿ ಇಂದು ಆಯೋಜಿಸಿದ್ದ ಲೈಂಗಿಕ ದೌರ್ಜನ್ಯ, ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಅಧಿಕಾರಿಗಳು, ಸಿಬ್ಬಂದಿ, ಆಂತರಿಕ ದೂರು ನಿವಾರಣಾ ಸಮಿತಿ ಸದಸ್ಯರಿಗೆ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಮಾತನಾಡಿದರು.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದಾಗ ದೂರು ನೀಡುವುದಕ್ಕೆ ಹಿಂಜರಿಯಬಾರದು. ಕಾನೂನಿನಡಿ ರಕ್ಷಣೆ ಪಡೆಯುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಅರಿತು ದೌರ್ಜನ್ಯದ ವಿರುದ್ಧ ಸೆಟೆದು ನಿಲ್ಲಬೇಕು ಎಂದು ಸಲಹೆ ನೀಡಿದರು. ಮರ್ಯಾದೆಗೆ ಅಂಜಿ ಕೆಲ ಮಹಿಳೆಯರು ಲೈಂಗಿಕ ದೌರ್ಜನ್ಯ, ಕಿರುಕುಳ ಸಹಿಸಿಕೊಂಡಿರುತ್ತಾರೆ. ಹಲವರಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವಿನ ಕೊರತೆ ಇದೆ. ಮಹಿಳೆಯರು ಕಾಯಿದೆಯ ಮಹತ್ವ ಅರಿತು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಾಯ್ದೆ ರೂಪಿಸಲಾಗಿದೆ. ಎಲ್ಲವನ್ನೂ ಕಾಯಿದೆಯಿಂದಲೇ ಸರಿಪಡಿಸಲಾಗುವುದಿಲ್ಲ. ಕಾಯ್ದೆಗಿಂತ ಸಂಸ್ಕಾರವೂ ಮುಖ್ಯ. ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ನೋಡುವ ಮನೋಭಾವ ಬೆಳೆಸಿಕೊಂಡರೆ ಕಾಯ್ದೆಗಳ ಅಗತ್ಯವೇ ಇರುವುದಿಲ್ಲ ಎಂದರು. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ದೌರ್ಜನ್ಯದ ಬಗ್ಗೆ ಮಾಹಿತಿ ಸೂಚನ ಲಕಗಳಲ್ಲಿ ಪ್ರದರ್ಶಿಸಬೇಕು. ಮಹಿಳಾ ಆಯೋಗ ಸಮಿತಿ ರಚನೆ ಮಾಡಿ ಗ್ರಾಮ ಸಭೆಗಳನ್ನು ನಡೆಸಬೇಕು ಎಂದು ತಿಳಿಸಿದರು.

ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್. ಲತಾ ಮಾತನಾಡಿ, ಕಚೇರಿಗಳಲ್ಲಿ ಕೆಲಸ ಮಾಡುವ ವೇಳೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಅವುಗಳನ್ನು ಸಹಿಸಿಕೊಳ್ಳಬಾರದು. ಅದರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಒಬ್ಬ ಮಹಿಳೆ ಮಗಳಾಗಿ, ಅಕ್ಕಳಾಗಿ, ಹೆಂಡತಿಯಾಗಿ, ತಾಯಿಯಾಗಿ ಎಲ್ಲಾ ಪಾತ್ರ ನಿರ್ವಹಿಸುತ್ತಾಳೆ. ಒಂದು ದೇಶದ ಅಭಿವೃದ್ಧಿ ಅಳೆಯಬೇಕಾದರೆ ಆ ದೇಶದಲ್ಲಿ ಮಹಿಳೆಯರನ್ನು ಯಾವ ರೀತಿ ಕಾಣುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ನಾವೆಲ್ಲರೂ ಅರ್ಥ ಮಾಡಿಕೊಂಡು ಮಹಿಳೆಯರಿಗೆ ಗೌರವ ನೀಡುವ ಮೂಲಕ ದೇಶದ ಪ್ರಗತಿ ಸಾಧಿಸಬೇಕು ಎಂದರು.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇವಲ ಸರ್ಕಾರಿ ಕಚೇರಿಗಳಲ್ಲದೆ ಖಾಸಗಿಯಾಗಿ ಕೆಲಸ ಮಾಡುವ ಸ್ಥಳದಲ್ಲಿಯೂ ಕಂಡುಬರುತ್ತವೆ. ಹೆಣ್ಣಾದವಳು ಕೆಲ ಕೆಲಸಗಳಿಗೆ ಮಾತ್ರ ಸೀಮಿತ. ಹೆಣ್ಣು ಹೊರ ಹೋಗುವಂತಿಲ್ಲ, ಆ ಕೆಲಸ ಮಾಡುವಂತಿಲ್ಲ, ಗಂಡು ಎಲ್ಲಿ ಬೇಕಾದರೂ ಹೋಗಬಹುದು ಬರಬಹುದು ಎಂದು ನಮ್ಮ ಮನೆಗಳಲ್ಲಿರುವ ಈ ಭಾವನೆಯಿಂದಲೇ ಕೆಲ ದೌರ್ಜನ್ಯಗಳು ಶುರುವಾಗುತ್ತವೆ. ಈ ಹಿಂದೆ ಮಹಿಳೆಯರ ರಕ್ಷಣೆಗಾಗಿ ಯಾವುದೇ ಕಾಯ್ದೆಗಳು ರಚನೆಯಾಗಿರಲಿಲ್ಲ. ಆನಂತರದಲ್ಲಿ ಕಾಯ್ದೆಗಳು ರೂಪಿತಗೊಂಡಿವೆ. ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಸಂಪನ್ಮೂಲ ವ್ಯಕ್ತಿಗಳಾಗಿ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ರಿಷಿ ಮದನ್, ಬೆಂಗಳೂರು ಕ್ರೆಸ್ಟ್ಯುನಿವರ್ಸಿಟಿ ಡಾ.ಎನ್ ಸ್ವಪ್ನ, ಸಿ.ಜಿ. ರೋಹಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೆಂಕಟೇಶ್ ರೆಡ್ಡಿ ಇದ್ದರು.

About The Author

Leave a Reply

Your email address will not be published. Required fields are marked *