ದೊಡ್ಡಬಳ್ಳಾಪುರದಲ್ಲಿ ಕೊಠಡಿಯ ಶೀಟ್ ಬಿದ್ದು ವಿದ್ಯಾರ್ಥಿಗಳಿಗೆ ಗಾಯ
1 min readದೊಡ್ಡಬಳ್ಳಾಪುರದಲ್ಲಿ ಕೊಠಡಿಯ ಶೀಟ್ ಬಿದ್ದು ವಿದ್ಯಾರ್ಥಿಗಳಿಗೆ ಗಾಯ
ದೊಡ್ಡಬಳ್ಳಾಪುರದಲ್ಲಿ ಮೂವರು ಮಕ್ಕಳಿಗೆ ತೀವ್ರ ಗಾಯ, ಆಸ್ಪತ್ರೆಗೆ ದಾಖಲು
ತಹಸೀಲ್ದಾರ್, ಬಿಇಒ ಸ್ಥಳಕ್ಕೆ ಭೇಟಿ ಪರಿಶೀಲನೆ
ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡದ ಮೇಲಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮೌಂಟ್ ಹೀರಾ ಪ್ರೌಢಶಾಲೆಯಲ್ಲಿ ನಡೆದಿದೆ.
ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡದ ಮೇಲಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಮೌಂಟ್ ಹೀರಾ ಪ್ರೌಢಶಾಲೆಯಲ್ಲಿ ನಡೆದಿದೆ. ಅಫ್ರಿನ್, ರಕಿಬಾ, ರುಕೀಯಾ ಸೇರಿ ಹಲವು ಮಕ್ಕಳು ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ನಗರದ ಈ ಶಾಲೆಯ ಎರಡನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಕೆಲಸ ಮಾಡುವ ಕಾರ್ಮಿಕರ ನಿರ್ಲಕ್ಷ ದಿಂದ ಮುರ್ನಾಲ್ಕು ಸೀಮೆಂಟ್ ಇಟ್ಟಿಗೆಗಳು ಶಾಲಾ ಕೊಠಡಿಯ ಶೀಟ್ ಮೇಲೆ ಬಿದ್ದಿದೆ. ಈ ಘಟನೆಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಮಕ್ಕಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್, ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಉನ್ನೀಸಾ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಬಿಇಒ ಸೈಯದ್ ಉನ್ನಿಸಾ, ಶಾಲಾ ಮಕ್ಕಳು ಬೀಗ ಹಾಕಿದ್ದ ಕೊಠಡಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಶಾಲಾ ಮುಖ್ಯಸ್ಥರ ನಿರ್ಲಕ್ಷದಿಂದಲೇ ಅವಘಡ ಸಂಭವಿಸಿದೆ. ಸಂಪೂರ್ಣ ವರದಿ ತರಿಸಿಕೊಂಡು ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಗಾಯಾಳು ಮಕ್ಕಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.