ದೊಡ್ಡಬಳ್ಳಾಪುರ ನಗರಸಭೆಗೆ ಸುಮಿತ್ರಮ್ಮ ನೂತನ ಅಧ್ಯಕ್ಷೆ
1 min readದೊಡ್ಡಬಳ್ಳಾಪುರ ನಗರಸಭೆಗೆ ಸುಮಿತ್ರಮ್ಮ ನೂತನ ಅಧ್ಯಕ್ಷೆ
ಎನ್‌ಡಿಎ ಮೈತ್ರಿಕೂಟದ ವಶಕ್ಕೆ ದೊಡ್ಡಬಳ್ಳಾಪುರ ನಗರಸಭೆ
ಉಪಾಧ್ಯಕ್ಷರಾಗಿ ಜೆಡಿಎಸ್‌ನ ಮಲ್ಲೇಶ್ ಆಯ್ಕೆ
ನಿರೀಕ್ಷೆಯಂತೆ ದೊಡ್ಡಬಳ್ಳಾಪುರ ನಗರಸಭೆ ಅಧಿಕಾರವನ್ನು ಬಿಜೆಪಿ ಜೆಡಿಎಸ್ ಮೈತ್ರಿಕೂಟ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುಕ್ತಾಯವಾಗಿದ್ದು, ಬಿಜೆಪಿ ಜೆಡಿಎಸ್ ಮೈತ್ರಿಗೆ ನಗರಸಭೆ ಚುಕ್ಕಾಣಿ ಮತ್ತೊಮ್ಮೆ ದೊರೆತಿದೆ.
ದೊಡ್ಡಬಳ್ಳಾಪುರ ನಗರಸಭೆ ¸ಭಾಂಗಣದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೊದಲೇ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಂಡಿದ್ದವು. ಈ ಪ್ರಕ್ರಿಯೆ ಸುಗಮವಾಗಿ ಸಾಗುವ ಮೂಲಕ ಅಧ್ಯಕ್ಷ ಸ್ಥಾನವನ್ನು ತಮ್ಮ ತೆಕ್ಕೆಗೆ ಪಡೆಯುವುದಕ್ಕಾಗಿ ಶಾಸಕ ಧೀರಜ್ ಮುನಿರಾಜು ರಣತಂತ್ರ ರೂಪಿಸಿದ್ದರು. ನಿರೀಕ್ಷೆಯಂತೆಯೇ ಅಧ್ಯಕ್ಷ ಸ್ಥಾನ ಬಿಜೆಪಿಗೆ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ಗೆ ದೊರತಿದ್ದು, ಮತ್ತೊಮ್ಮೆ ಅಧಿಕಾರಿ ಎನ್‌ಡಿಎ ಮೈತ್ರಿಕೂಟಕ್ಕೆ ಲಭ್ಯವಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಕಮಲ-ದಳ ಮೈತ್ರಿಯಿಂದ ಸ್ಪರ್ಧಿಸಿದ್ದ ಸುಮಿತ್ರ ಆನಂದ್ ಅವರಿಗೆ ಸಂಸದ ಮತ್ತು ಶಾಸಕ ಇಬ್ಬರ ಮತ ಸೇರಿ 23 ಮತಗಳು, ಕಾಂಗ್ರೆಸ್‌ನಿ0ದ ಸ್ಪರ್ಧಿಸಿದ್ದ ರೂಪಿಣಿ ಮಂಜುನಾಥ್ ಅವರಿಗೆ 10 ಮತ ದೊರೆತವು. 23 ಮತ ಪಡೆದ ಸುಮಿತ್ರ ಆನಂದ್ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಕಮಲ- ದಳ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲೇಶ್ ಅವರಿಗೆ ಸಂಸದ ಮತ್ತು ಶಾಸಕರ ಇಬ್ಬರ ಮತ ಸೇರಿ 23 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಆನಂದ್ ಅವರಿಗೆ 10 ಮತ ದೊರೆತು, 23 ಮತ ಪಡೆದ ಮಲ್ಲೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಸಂಸದ ಡಾ.ಕೆ ಸುಧಾಕರ್, ಯುವ ನಾಯಕ, ಶಾಸಕ ಧೀರಜ್ ಮುನಿರಾಜು ಮತ್ತು ಜೆಡಿಎಸ್ ಮುಖಂಡ ಬಿ.ಮುನೇಗೌಡ ಸೇರಿದಂತೆ ಎರಡೂ ಪಕ್ಷಗಳ ನಾಯಕರ ನೇತೃತ್ವದಲ್ಲಿ ನಗರಸಭೆ ಚುನಾವಣೆಯಲ್ಲಿ ಎನ್.ಡಿ.ಎ ಜಯಭೇರಿ ಬಾರಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯ, ಅನುದಾನಗಳನ್ನ ನಗರಸಭೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ ಎನ್.ಡಿ.ಎ ಮೈತ್ರಿಗೆ ಪಕ್ಷೇತರರೂ ಬೆಂಬಲ ಸೂಚಿಸಿದ್ದು 31 ಮತಗಳಲ್ಲಿ 23 ಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಬಿಜೆಪಿಗೆ ಅಧ್ಯಕ್ಷ ಸ್ಥಾನ, ಜೆಡಿಎಸ್ ಗೆ ಉಪಾಧ್ಯಕ್ಷ ಸ್ಥಾನ ಹಂಚಿಕೊ0ಡು ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬAತೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲಾಗುವುದು. ಎಲ್ಲಾ ವಾರ್ಡ್ ಗಳಿಗೂ ಸಮಾಂತರವಾದ ಆದ್ಯತೆ ನೀಡಿ ನಗರದ ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಶ್ರಮಿಸಲಿ ಎಂದರು.