ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
1 min readತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗೋಷ್ಠಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ನಡೆಯಿತು. ಡಾ. ಆಂಜನಪ್ಪ, ದೊಡ್ಡಬೆಳವಂಗಲ ಪಿಎಸ್‌ಐ ವರಲಕ್ಷ್ಮಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಮಹಿಳಾ ವಿಚಾರಗೋಷ್ಠಿ ಕುರಿತು ಮಾತನಾಡಿದ ಡಾ. ಆಂಜನಪ್ಪ, ಇತ್ತಿಚಿನ ದಿನಗಳಲ್ಲಿ ಥೈರಾಯ್ಡ್, ಹಾರ್ಮೋನ್ ಸಮಸ್ಯೆ ಹೆಚ್ಚಾಗುತ್ತಿದ್ದು ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ ಸಮಸ್ಯೆ ಬರುತ್ತಿದೆ. ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು.
ಕಿಡ್ನಿ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದರು. ಚಿಕ್ಕ ವಯಸ್ಸಿನ¯್ಲೆÃ ಹೃದಯಾಘಾತ ವಾಗುವುದು ಹೆಚ್ಚಾಗುತ್ತಿದೆ ಇದಕ್ಕೆಲ್ಲ ಆಹಾರ ಪದ್ಧತಿ ಹಾಗೂ ಜೀವನ ಶೈಲಿ ಕಾರಣ ಎಂದರು.
ಮಹಿಳೆಯರಲ್ಲಿ ಅತೀ ಹೆಚ್ಚು ಕಂಡುಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿ, ಇತ್ತಿಚಿನ ದಿನಗಳಲ್ಲಿ ಅಹಾರ ಪದ್ಧತಿ ಯಿಂದ ಗರ್ಭಕೋಶದ ಸಮಸ್ಯೆ ಬರುತ್ತಿದೆ. ಇದರಿಂದ ಮರಣದ ಸಂಖ್ಯೆ ಹೆಚ್ಚುತ್ತಿದೆ, ಈ ಬಗ್ಗೆ ಗಮನ ಹರಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು. ಪಿಎಸ್‌ಐ ವರಲಕ್ಷಿö್ಮ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಖಿನ್ನತೆಯಿಂದ, ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವವರು ಹೆಚ್ಚಾಗಿದ್ದು, ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕಿದೆ ಎಂದರು.