ಡಾ. ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ

ನೆಲಮಂಗಲದಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾಧೀನ

ಅಕ್ರಮ ಭೂಮಿ ಮಂಜೂರು ವಜಾಗೆ ಒತ್ತಾಯ

ತಗಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ

December 24, 2024

Ctv News Kannada

Chikkaballapura

ಬಡವರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆ ಜಾರಿ

1 min read

ಬಡವರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆ ಜಾರಿ

ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಸಂಸದ ಸುಧಾಕರ್

ದೇಶದ ಪ್ರತಿ ಮೂಲೆಯಲ್ಲಿರುವ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿ ವಿವಿಧ ಇಲಾಖೆಗಳ ಮೂಲಕ ತಲುಪಿಸುತ್ತಿದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಬಾಗೇಪಲ್ಲಿ ನ್ಯಾಷನಲ್ ಪದವಿ ಕಾಲೇಜಿನಲ್ಲಿ ಮೈಸೂರು ಕೇಂದ್ರ ಸಂವಹನ ಇಲಾಖೆ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನ, ನೂತನ ಅಪರಾಧ ಕಾನೂನುಗಳು, ಪ್ರಧಾನ ಮಂತ್ರಿ ದೂರದೃಷ್ಟಿ 2047 ಮತ್ತು ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮೂರು ದಿನಗಳ ವಿಶೇಷ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಸಂಸದ ಡಾ.ಕೆ. ಸುಧಾಕರ್ ಉದ್ಘಾಟಿಸಿದರು.

ನಂತರ ಮಾತನಾಡಿದ ಸಮಸದರು, ಕೇಂದ್ರ ಸರ್ಕಾರ ಬಡವರು, ದೀನ ದುರ್ಬಲರು, ಕೃಷಿ ಕಾರ್ಮಿಕರು, ಯುವಜನರು, ಗಿರಿಜನರು ಮತ್ತು ಮಹಿಳೆಯರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಜಲಜೀವನ್ ಮಿಷನ್, ಮಹಿಳೆಯರ ಆರೋಗ್ಯ ಮತ್ತು ಸ್ವಾಭಿಮಾನದ ಸಂಕೇತವಾಗಿ ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣ, ಮಹಿಳೆಯರು ಮತ್ತು ಮಕ್ಕಳ ಅಪೌಷ್ಟಿಕತೆ ನಿವಾರಣೆ ಮಾಡಲು ಮಾತೃವಂದನಾ ಮತ್ತು ಪೋಷಣ್ ಅಭಿಯಾನ ಮುಂತಾದ 70 ಕ್ಕೂ ಹೆಚ್ಚು ಯೋಜನೆಗಳನ್ನು ಕಳೆದ ಒಂದು ದಶಕದಲ್ಲಿ ಜಾರಿ ಮಾಡಲಾಗಿದೆ ಎಂದರು.

ದಶಕಗಳ ಹಿಂದೆಯೇ ದೇಶದಲ್ಲಿ ಬ್ಯಾಂಕುಗಳ ರಾಷ್ಟಿಕರಣವಾಗಿದ್ದರೂ ಬಡವರು, ಜನಸಾಮಾನ್ಯರೆಲ್ಲರೂ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ಹೊಂದಲು ಜನ ಯೋಜನೆ ಜಾರಿಯಾಗಬೇಕಾಯಿತು. ಕಳೆದ ಒಂದು ದಶಕದಲ್ಲಿ ಜನ ಯೋಜನೆಯಡಿ 48 ಕೋಟಿ ಜನರು ಖಾತೆ ತೆರೆದಿದ್ದು, ಇದೊಂದು ದಾಖಲೆಯಾಗಿದೆ. ಗ್ರಾಮೀಣ ಭಾಗದ ಅಸಹಾಯಕ ವರ್ಗಗಳ ಶ್ರೇಯೋಭಿವೃದ್ಧಿಯಿಂದ ಈ ಯೋಜನೆಗಳನ್ನು ಜಾರಿ ಮಾಡಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಲಾಭನುಭವಿಗಳಿಗೆ ತಲುಪಿಸಲು ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಮಾಡಿ ಜನರಲ್ಲಿ ಜಾಗೃತಿಯನ್ನೂ ಮೂಡಿಸಬೇಕು ಎಂದರು.

ಕೇ0ದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ವಿವಿಧ ಫ್ಲೆಕ್ಸ್, ಬ್ಯಾನರ್, ಪ್ರದರ್ಶನ ಫಲಕ, ಸಾಕ್ಷಚಿತ್ರ ಪ್ರದರ್ಶಿಸಿ ಅರಿವು ಮೂಡಿಸಲಾಯಿತು.

About The Author

Leave a Reply

Your email address will not be published. Required fields are marked *