ನಾಳೆ ಕವಲಂದೆ ಗ್ರಾಮದ ನೂತನ ಪೊಲೀಸ್ ಠಾಣೆ ಉದ್ಘಾಟಿಸಲಿರುವ ಸಿಎಂ
1 min readನಾಳೆ ಕವಲಂದೆ ಗ್ರಾಮಕ್ಕೆ ಸಿಎಂ ಆಗಮನ ನೂತನ ಪೊಲೀಸ್ ಠಾಣೆ ಉದ್ಘಾಟಿಸಲಿರುವ ಸಿಎಂ
ನಂಜನಗೂಡು ತಾಲ್ಲೂಕಿನ ಕವಲಂದೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆ ಉಧ್ಘಾಟನೆಗೆ ಡಿ.22 ರಂದು ಶುಕ್ರವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಕವಲಂದೆ ಗ್ರಾಮದಲ್ಲಿಯೇ ಕವಲಂದೆ , ಅಂತರಸಂತೆ ಮತ್ತು ಜಯಪುರ ಪೊಲೀಸ್ ಠಾಣೆಗಳ ಉಧ್ಘಾಟನೆ ಮಾಡಲಿದ್ದಾರೆ. ಸಚಿವರಾದ ಡಾ .ಹೆಚ್. ಸಿ ಮಹದೇವಪ್ಪ, ಕೆ.ವೆಂಕಟೇಶ್, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಶಾಸಕ ದರ್ಶನ್ ಧ್ರುವನಾರಾಯಣ್, ಸಂಸದರಾದ ಶ್ರೀನಿವಾಸ್ ಪ್ರಸಾದ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ.
ಈಗಾಗಲೇ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ನೇತೃತ್ವದಲ್ಲಿ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು, ಪಿಎಸ್ಐ ಕೃಷ್ಣಕಾಂತ ಕೋಳಿ, ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ಕವಲಂದೆ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.