ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ಸಿಗರು
1 min readರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ಸಿಗರು
ಸಿಎ0 ಸಿದ್ದು ತವರು ತಗಡೂರಿನಲ್ಲಿ ಬೃಹತ್ ಪ್ರತಿಭಟನೆ
ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ವರುಣ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ವರುಣ ಕ್ಷೇತ್ರದ ತಗಡೂರು ಗ್ರಾಮದ ಅಂಬೇಡ್ಕರ್ ಸರ್ಕಲ್ ನಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆಗಳ ಕೂಗಿ ಪ್ರತಿಭಟನೆ ನಡೆಸಿದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಕಾನೂನು ಬಾಹಿರ ನಡೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಗಾರ್ಡನ್ ಮಹೇಶ್, ಶಿವರಾಂ, ಗುರುಮಲ್ಲೆಶ್, ಬಸವರಾಜು ಸೇರಿದಂತೆ ಹಲವರು ಹಾಜರಿದ್ದರು.