ಮುಖ್ಯಮಂತ್ರಿಗೆ ಪತ್ರ ಬರೆದ ಅತಿಥಿ ಉಪನ್ಯಾಸಕರು
1 min readಸೇವಾ ಸಕ್ರಮಾತಿಗೆ ಒತ್ತಾಯಿಸಿ ಅನಿರ್ಧಿಷ್ಟ ಮುಷ್ಕರ ನಡೆಸುತ್ತಿರುವ ಅತಿಥಿ ಉಪನ್ಯಾಸಕರು 28ನೇ ದಿನದ ಅಂಗವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆಯುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.
ನಗರದ ಚೆನ್ನಯ್ಯ ಪಾರ್ಕ್ ಮುಂಭಾಗ ಬುಧವಾರ ಜಿಲ್ಲಾ ಅತಿಥಿ ಉಪನ್ಯಾಸಕ ಸಂಘದ ಪದಾಧಿಕಾರಿಗಳು ಸಾರ್ವಜನಿಕರ ಸಹಯೋಗದಲ್ಲಿ ಪತ್ರಚಳವಳಿ ನಡೆಸಿ ಸರಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಮುನಿರಾಜು ನ.೨೩ರಿಂದ ನಿರಂತರವಾಗಿ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಜಾಣಕುರುಡುತನ ಪ್ರದರ್ಶನ ಮಾಡುತ್ತಿದೆ ಎಂದು ಆರೋಪಿಸಿದರು.
ಪತ್ರ ಚಳವಳಿಗೆ ನಾಗರೀಕರು ಉತ್ತಮ ಸ್ಪಂಧನೆ ನೀಡಿದ್ದು, ಪತ್ರ ಮುಖೇನ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು. ಆಮೂಲಕ ಬಡಮಕ್ಕಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.
ಪತ್ರ ಚಳವಳಿಯಲ್ಲಿ ಜಿಲ್ಲಾಧ್ಯಕ್ಷ ಮುನಿರಾಜು ಎಂ ಅರಿಕೆರೆ, ಉಪಾಧ್ಯಕ್ಷ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಗಂಗಾಧರ್, ಕಾರ್ಯಧ್ಯಕ್ಷ ವೆಂಕಟರಮಣ, ಡಾ.ವೆಂಕಟೇಶ್, ರಾಮಚಂದ್ರಪ್ಪ ಇದ್ದರು.