ಸಗಣಿನೀರು ಸುರಿದುಕೊಂಡು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು
1 min readಸಗಣಿನೀರು ಸುರಿದುಕೊಂಡು ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು ಖಾಯಮಾತಿಗಾಗಿ ಒತ್ತಾಯಿಸಿ 34ನೇ ದಿನದತ್ತ ಸಾಗಿದ ಹೋರಾಟ
ಮೈಮೇಲೆ ಸಗಣಿನೀರು ಸುರಿದುಕೊಂಡು ಖಾಯಮಾತಿಗಾಗಿ ಸರಕಾರವನ್ನು ಆಗ್ರಹಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ನಡೆಯಿತು.
ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರು ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದಿಂದ ನಡೆದ 34ನೇ ದಿನದ ಹೋರಾಟದ ಭಾಗವಾಗಿ ಸಂಘದ ಜಿಲ್ಲಾಧ್ಯಕ್ಷ ಮುನಿರಾಜು ತಮ್ಮ ಮೈಮೇಲೆ ಸಗಣಿ ನೀರನ್ನು ಸುರಿದುಕೊಂಡು ಪ್ರತಿಭಟಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅವರು, ನ್ಯಾಯಯುತ ಬೇಡಿಕೆಗಾಗಿ 34 ದಿನಗಳ ಕಾಲ ನಿರಂತವಾಗಿ ರಾಜ್ಯದೆಲ್ಲೆಡೆ ತರಗತಿ ಬಹಿಷ್ಕರಿಸಿ ಹೋರಾಟ ಮಾಡುತ್ತಿದ್ದೇವೆ. ಆದರೂ ಸರಕಾರ ನಮ್ಮತ್ತ ಗಮನಹರಿಸಿದಂತೆ ಕಾಣುತ್ತಿಲ್ಲ.ಹೀಗಾಗಿಯೇ ಸರಕಾರದ ಕಣ್ತೆರಸುವ ಉದ್ದೇಶದಿಂದ ಸಗಣಿ ನೀರನ್ನು ಮೈಮೇಲೆ ಸುರಿದುಕೊಂಡು ಪ್ರತಿಭಟನೆ ದಾಖಲಿಸಿದ್ದೇವೆ ಎಂದರು.
ಉನ್ನತ ಶಿಕ್ಷಣ ಸಚಿವರು ನಮ್ಮ ಜಿಲ್ಲೆಯವರೇ ಆದರೂ ಸಮಸ್ಯೆ ಬಗೆಹರಿಸದೆ, ಇದಕ್ಕೊಂದು ಪರಿಹಾರ ಕಾಣಿಸದೆ ಸಮಸ್ಯೆಯನ್ನು ಜೀವಂತವಾಗಿಟ್ಟುಕೊAಡಿರುವುದೇ ಹೋರಾಟ ಮುಂದುವರೆಯಲು ಕಾರಣವಾಗಿದೆ. ಇನ್ನಾದರೂ ಸರಕಾರ ಇತ್ತ ಕಾಳಜಿ ತೋರಿಸಲಿ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷ ವೆಂಕಟರಮಣ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಉಪಾಧ್ಯಕ್ಷ ಮಂಜುನಾಥ್ ಇದ್ದರು.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura