ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಉದ್ಘಾಟಿಸಿದ ಶಾಸಕ
1 min readಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಉದ್ಘಾಟಿಸಿದ ಶಾಸಕ
ಅಂಬೇಡ್ಕರ್ ಜಯಂತಿ ಅಂಗವಾಗಿ ಚರ್ಚಾ ಸ್ಪರ್ಧೆ
ನಂಜನಗೂಡು ನಗರದ ಅಂಬೇರ್ಡ್ಕ ಭವನದಲ್ಲಿ ನಂಜನಗೂಡು ತಾಲ್ಲೂಕು ಅಂಬೇಡ್ಕರ್ ಯುವಕ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಯುವ ಸಮುದಾಯದಿಂದ ಮಾತ್ರ ಜಗತ್ತಿನ ಸಮಾಜ ಪರಿವರ್ತನೆ ಸಾಧ್ಯ ಎಂಬ ವಿಷಯದ ಮೇಲೆ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಆಯೋಜಿಸಲಾಗಿತ್ತು.
ನಂಜನಗೂಡು ನಗರದ ಅಂಬೇರ್ಡ್ಕ ಭವನದಲ್ಲಿ ನಂಜನಗೂಡು ತಾಲ್ಲೂಕು ಅಂಬೇಡ್ಕರ್ ಯುವಕ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಯುವ ಸಮುದಾಯದಿಂದ ಮಾತ್ರ ಜಗತ್ತಿನ ಸಮಾಜ ಪರಿವರ್ತನೆ ಸಾಧ್ಯ ಎಂಬ ವಿಷಯದ ಮೇಲೆ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಆಯೋಜಿಸಲಾಗಿತ್ತು. ಶಾಸಕ ದರ್ಶನ್ ಧ್ರುವನಾರಾಯಣ್ ಸ್ಪರ್ಧೆ ಉದ್ಘಾಟಿಸಿದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಮೈಸೂರು ಜಿಲ್ಲೆಯ 15ಕ್ಕೂ ಹೆಚ್ಚು ಪದವಿ ಕಾಲೇಜಿನ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ಜುಲೈ 10 ರಂದು ಅಂಬೇಡ್ಕರ್ ಅವರ ಜಯಂತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಹುಮಾನ ವಿತರಣೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಎಎಸ್ ಪಿ ಡಾ. ನಂದಿನಿ, ನಗರ ಬ್ಲಾಕ್ ಅಧ್ಯಕ್ಷ ಸಿ.ಎಂ ಶಂಕರ್, ನಾಗೇಶ್ ರಾಜ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ಎಂ ವಿಜಯಕುಮಾರ್, ಚುಂಚನಹಳ್ಳಿ ಮಶ್, ಮಲ್ಲಹಳ್ಳಿ ನಾರಾಯಣ್, ಸುರೇಶ್ ಶಂಕರಪುರ ಭಾಗವಹಿಸಿದ್ದರು.