ಗೌರಿಬಿದನೂರು ಕ್ಷೇತ್ರದ ಅಭಿವೃದ್ಧಿ ಪ್ರಸ್ತಾಪಿಸಿದ ಶಾಸಕ
1 min readಗೌರಿಬಿದನೂರು ಕ್ಷೇತ್ರದ ಅಭಿವೃದ್ಧಿ ಪ್ರಸ್ತಾಪಿಸಿದ ಶಾಸಕ
ಹಿಂದೂಪುರ ರಾಜ್ಯ ಹೆದ್ದಾರಿಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ
ಬಾಕಿ ಇರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಶಾಸಕರ ಆಗ್ರಹ
ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡರು ಸದನದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಾನ ಸಭಾ ಕಲಾಪದ ಪ್ರಶ್ನೋತ್ತರ ವೇಳೆ ಗೌರಿಬಿದನೂರು – ಹಿಂದೂಪುರ ರಾಜ್ಯ ಹೆದ್ದಾರಿ ೯ರ ಅಗಲೀಕರಣ ಸಂಬ0ಧ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕುರಿತು ಗಮನ ಸೆಳೆದಿದ್ದಾರೆ.
ಕಳೆದ ೬ ವರ್ಷಗಳ ಹಿಂದೆ ಗೌರಿಬಿದನೂರು, ಹಿಂದೂಪುರ ರಾಜ್ಯ ಹೆದ್ದಾರಿ ಅಗಲೀಕರಣಕ್ಕಾಗಿ ರೈತರಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆಗ ಜಮೀನಿಗೆ ನಿಗಧಿಯಾಗಿದ್ದ ಸುಮಾರು ೧೫ ಕೋಟಿ ಪರಿಹಾರದಲ್ಲಿ ಕೇವಲ ೮ ಕೋಟಿ ಪರಿಹಾರ ಮಾತ್ರ ರೈತರಿಗೆ ದೊರೆತಿದ್ದು, ಭೂಮಿ ಕಳೆದುಕೊಂಡ ಹಲವಾರು ರೈತರಿಗೆ ಸುಮಾರು ೬ ಕೋಟಿಗೂ ಹೆಚ್ಚು ಪರಿಹಾರ ಬಿಡುಗಡೆ ಮಾಡದೆ ರೈತರಿಗೆ ತೊಂದರೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ರಾಜ್ಯ ಹೆದ್ದಾರಿಯಲ್ಲಿ ಗೌರಿಬಿದನೂರು ವಿಧಾನ ಸಭಾ ಕ್ಷೇತ್ರದ ಚಿಕ್ಕಕುರುಗೊಡು ಗ್ರಾಮದ ಬಳಿ ಸುಮಾರು ೪೫೦ ಮೀಟರ್ ರಸ್ತೆ ಕಾಮಗಾರಿ ಇನ್ನೂ ಪೂರ್ಣ ಮಾಡಿಲ್ಲ ಎಂದು ಲೋಕೋಪಯೋಗಿ ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಯಿಸಿರುವ ಸಚಿವರು, ಮಾರ್ಚ್ ಅಂತ್ಯದ ವೇಳೆಗೆ ಪರಿಹಾರ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವ ಜೊತೆಗೆ ಉಳಿಕೆ ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.