ಜನ ಸ್ಪಂದನ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ ಶಾಸಕ
1 min readಬಾಗೇಪಲ್ಲಿ ತಾಲ್ಲೂಕಿನ ಪಾತಪಾಳ್ಯ ಹೋಬಳಿ ಬಿಳ್ಳೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ, ಕಂದಾಯ ಇಲಾಖೆ, ಪಂಚಾಯಿತಿ ರಾಜ್, ಇವರ ಸಹೋಯೋಗದಲ್ಲಿ ಆಯೋಜಿಸಲಾಗಿದ್ದ ಜನ ಸ್ಪಂದನ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ ಕೆಲ ಯೋಜನೆಗಳ ಹಣ ಬಿಡುಗಡೆ ಮಾಡುವಲ್ಲಿ ವಿಳಂಬವಾಗಿದೆ ಎಂದು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಾಗದ ಕೆಲ ಇಲಾಖೆ ಅಧಿಕಾರಿಗಳಿಗೆ ಸರ್ಕಾರಿ ಯೋಜನೆಗಳ ಅನುಮೋದನೆ ನೀಡುವ ಮೊದಲು ತಮಗೆ ಯೋಗ್ಯತೆ ಇದಿಯಾ-ಇಲ್ಲವಾ ಎಂಬುವುದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಿ ಸವಲತ್ತುಗಳ ಬಗ್ಗೆ ಅನುಮತಿ ನೀಡಿ ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಶಾಸಕರು ತರಾಟೆಗೆ ತೆಗೆದುಕೊಂಡರು.
ಇನ್ನು ಮುಂದುವರೆದು ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಗ್ಯಾರೆಂಟಿ ೫ ಯೋಜನೆಗಳು ನೀಡುವಲ್ಲಿ ನಮ್ಮ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರ ಸರ್ಕಾರ ಸಂಪೂರ್ಣ ಯಶಸ್ವಿಯಾಗಿದೆ ಜೊತೆಗೆ ಕಾಂಗ್ರೇಸ್ ಸರ್ಕಾರ ತೃಪ್ತಿ ತಂದಿದೆ
ನಮ್ಮ ಇಡೀ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೇ ಬಾಲ್ಯ ವಿವಾಹದಲ್ಲಿ ಬಾಗೇಪಲ್ಲಿ ತಾಲ್ಲೂಕು ಮೊದಲ ಸ್ಥಾನದಲ್ಲಿರುವುದು ಮನಸಿಗೆ ತುಂಬಾ ನೋವಾಗಿದೆ, ಪೋಷಕರು ೧೪-೧೫ ವರ್ಷದ ಮಕ್ಕಳಿಗೆ ಗೊಪ್ಯವಾಗಿ ಮದುವೆ ಮಾಡುತ್ತಿದ್ದು ಪೋಷಕರು ಎಚ್ಚರ ವಹಿಸಿ ಬಾಲ್ಯ ವಿವಾಹಗಳು ನಡೆಯದಂತೆ ಸಹಕರಿಸಿ ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕೈ ಜೋಡಿಸಿ ಎಂದರು. ಬಿಳ್ಳೂರುನಲ್ಲಿ ಸುಮಾರು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಅಲ್ಪಸಂಖ್ಯಾತ ಮುರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.