ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಸಂಸದ
1 min readದ್ರಾಕ್ಷಿ ಬೆಳೆಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದ ಸಂಸದ
ಅಧಿವೇಶನದಲ್ಲಿ ಚಿಕ್ಕಬಳ್ಳಾಪುರ, ಬೆಂ. ಗ್ರಾ ಜಿಲ್ಲೆಗಳ ದ್ರಾಕ್ಷಿ ಬೆಳೆಗಾರರ ಸಮಸ್ಯೆ
ಕೇಂದ್ರ ಸರ್ಕಾರದ ಗಮನ ಸೆಳೆದ ಸಂಸದ ಡಾ.ಕೆ. ಸುಧಾಕರ್
ದ್ರಾಕ್ಷಿ ಬೆಳೆಗಾರರಿಗೆ ಹನಿ ನೀರಾವರಿಗೆ ಸಹಾಯಧನ
ಗೊಬ್ಬರ ಖರೀದಿ, ಸಿಂಪಡಣೆ ಯಂತ್ರ ಖರೀದಿಗೆ ಸಹಾಯ
ಕೇಂದ್ರ ಕೃಷಿ, ರೈತರ ಕಲ್ಯಾಣ ಸಚಿವಾಲಯ ಮಾಹಿತಿ
ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದ್ರಾಕ್ಷಿ ಕೃಷಿ ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬೆಳೆಗಾರರಿಗೆ ಹನಿ ನೀರಾವರಿಗಾಗಿ ಸಾಮಾನ್ಯ ವರ್ಗಕ್ಕೆ ಶೇ.75 ಹಾಗೂ ಎಸ್ಸಿ/ಎಸ್ಟಿ ವರ್ಗಕ್ಕೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅವರು ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಡಿ, ದ್ರಾಕ್ಷಿ ಬೆಳೆಗಾರರ ಸಂಕಷ್ಟಗಳನ್ನು ಸರ್ಕಾರದ ಗಮನಕ್ಕೆ ತಂದು ಪ್ರಶ್ನೆ ಕೇಳಿದ್ದಾರೆ. ಈ ಕುರಿತು ಕೇಂದ್ರ ಸರ್ಕಾರ ಲಿಖಿತ ಉತ್ತರ ನೀಡಿ, ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದ್ರಾಕ್ಷಿ ಕೃಷಿ ಪ್ರೋತ್ಸಾಹಿಸಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬೆಳೆಗಾರರಿಗೆ ಹನಿ ನೀರಾವರಿಗಾಗಿ ಸಾಮಾನ್ಯ ವರ್ಗಕ್ಕೆ ಶೇ.75 ಹಾಗೂ ಎಸ್ಸಿ/ಎಸ್ಟಿ ವರ್ಗಕ್ಕೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದ್ರಾಕ್ಷಿ ಬೆಳೆಗಾರರು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕಾರಣಗಳಿಂದ ಅಪಾರ ನಷ್ಟ ಅನುಭವಿಸಿದ್ದಾರೆ. ಈ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಸರ್ಕಾರ ಯಾವೆಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಈ ಕುರಿತು ಉತ್ತರ ನೀಡಿರುವ ಸಚಿವಾಲಯ, ರಾಷ್ಟಿಯ ಕೃಷಿ ವಿಕಾಸ ಯೋಜನೆಯಡಿ, ಸಾಮಾನ್ಯ ವರ್ಗದ ಬೆಳೆಗಾರರಿಗೆ ಹೆಕ್ಟೇರ್ಗೆ ಗರಿಷ್ಠ ೨೪ ಸಾವಿರ ಹಾಗೂ ಎಸ್ಸಿ/ಎಸ್ಟಿ ಗೆ ಹೆಕ್ಟೇರ್ಗೆ ಗರಿಷ್ಠ ೩೦ ಸಾವಿರ ರೂ. ಗೊಬ್ಬರ ಸಹಾಯಧನ ನೀಡಲಾಗುತ್ತಿದೆ. ಜೊತೆಗೆ ಪೌಷ್ಠಿಕಾಂಶ ಹಾಗೂ ರೋಗ ನಿಯಂತ್ರಣಕ್ಕಾಗಿ ಹೆಕ್ಟೇರ್ಗೆ ಗರಿಷ್ಠ ೨ ಸಾವಿರ ರೂ. ನೀಡಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ.
ಕೀಟನಾಶಕ ಮತ್ತು ಗೊಬ್ಬರ ಸಿಂಪಡಣೆಗಾಗಿ ಯಂತ್ರ ಖರೀದಿಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ೭೬ ಸಾವಿರ ರೂ. ಹಾಗೂ ಎಸ್ಸಿ/ಎಸ್ಟಿ ಗೆ ಗರಿಷ್ಠ ೯೫ ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ. 2021-22 ಹಾಗೂ 2022-23 ನೇ ಸಾಲಿನಲ್ಲಿ ಅತಿಯಾದ ಮಳೆ ಹಾಗೂ ರೋಗಗಳಿಂದಾಗಿ ದ್ರಾಕ್ಷಿ ಬೆಳೆ ಪ್ರದೇಶ ಹಾಗೂ ಉತ್ಪಾದನೆಯಲ್ಲಿ ಗಣನೀಯ ಇಳಿಕೆ ಕಂಡುಬoದಿದೆ. 2022-23 ರಲ್ಲಿ ಚಿಕ್ಕಬಳ್ಳಾಪುರದಲ್ಲಿ 598 ಹೆಕ್ಟೇರ್ನಲ್ಲಿ ದ್ರಾಕ್ಷಿ ಬೆಳೆದಿದ್ದು, 13,113, ಟನ್ ಉತ್ಪಾದನೆಯಾಗಿದೆ. ಇದೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ 1,712 ಹೆಕ್ಟೇರ್ನಲ್ಲಿ ದ್ರಾಕ್ಷಿ ಬೆಳೆದಿದ್ದು, 43,043 ಟನ್ ದ್ರಾಕ್ಷಿ ಉತ್ಪಾದನೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಬೆಳೆಗಾರರು ನಷ್ಟ ಪರಿಹಾರ ಪಡೆಯಲು, ಹವಾಮಾನ ಆಧಾರಿತ ಬೆಳೆ ಬಿಮೆ ಯೋಜನೆಗೆ ಹೆಸರು ನೋಂದಾಯಿಸಲು ಸಲಹೆ ನೀಡಲಾಗುತ್ತಿದೆ. ಈ ಯೋಜನೆಯಡಿ, ಶೇ.5 ರಷ್ಟು ಅಂದರೆ ಹೆಕ್ಟೇರ್ಗೆ 14 ಸಾವಿರ ರೂ. ವಿಮೆ ಪಾವತಿಸಬೇಕು. ನಷ್ಟವಾದಾಗ ಹೆಕ್ಟೇರ್ಗೆ 2.80 ಲಕ್ಷ ರೂ. ಪರಿಹಾರ ಸಿಗಲಿದೆ ಎಂದು ಸಚಿವಾಲಯ ತಿಳಿಸಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday