ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

ಶಿಡ್ಲಘಟ್ಟದಲ್ಲಿ ಅಪರಾಧ ಮಾಸಾಚರಣೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗುಣಮುಖರಾಗಲಿ

ರಾಗಿ, ಹುರಳಿ ಒಕ್ಕಣೆ ಕೇಂದ್ರವಾದ ರಾಜ್ಯ ಹೆದ್ದಾರಿ

December 26, 2024

Ctv News Kannada

Chikkaballapura

ಏಡ್ಸ್ ಸೋಂಕಿತರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು

1 min read

ಏಡ್ಸ್ ಸೋಂಕಿತರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು

ನ್ಯಾಯಮೂರ್ತಿ ನೇರಳೆ ವೀರಭದ್ರಯ್ಯ ಭವಾನಿ ಮನವಿ

ಏಡ್ಸ್ ಸೋಂಕು ಚುಚ್ಚು ಮದ್ದುಗಳ ಸಲಕರಣೆಗಳ ಪುನರ್ ಬಳಕೆಯಿಂದ ಹಾಗೂ ಸೋಂಕಿತ ಗರ್ಭಿಣಿಯರಿಂದ ಶಿಶುಗಳಿಗೆ ಹರಡುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ ತಿಳಿಸಿದರು.

ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಭಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ, ಏಡ್ಸ್ ರೋಗ ರಕ್ತದಿಂದ ಹರಡುವ ಕಾಯಿಲೆಯಾಗಿದ್ದು, ಲೈಂಗಿಕ ಸಂಪರ್ಕ, ಒಬ್ಬರು ಬಳಸಿದ ಸೂಜಿ, ಕತ್ತರಿ ಮತ್ತೊಬ್ಬರು ಬಳಸಿದಾಗ, ಸ್ತನ್ಯಪಾನ ಮುಂತಾದ ಕಾರಣಗಳಿಂದ ಏಡ್ಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದರು.

ಏಡ್ಸ್ ಸೋಂಕು ತಡೆಯಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು, ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು. ಏಡ್ಸ್ನಿಂದ ಸೋಂಕಿತ ಹಾಗೂ ಕಳಂಕ, ತಾರತಮ್ಯಕ್ಕೆ ಒಳಗಾದ ವ್ಯಕ್ತಿಗಳಿಗೆ ನೈತಿಕ ಬೆಂಬಲ ನೀಡಬೇಕು. ಸರ್ಕಾರ ಎಚ್‌ಐವಿ ಸೋಂಕಿತರಿಗೆ ಹಲವಾರು ರೀತಿಯ ಯೋಜನೆಗಳನ್ನು ನೀಡಿ, ಸೋಂಕು ತಡೆಯಲು ಮುಂದಾಗುತ್ತಿದೆ. ಏಡ್ಸ್ ಸೊಂಕಿತರು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಬೇಕು. ಎಲ್ಲರೂ ಒಂದಾಗಿ ಏಡ್ಸ್ ವಿರುದ್ಧ ಹೋರಾಡುವಂತೆ ಪ್ರೇರೇಪಿಸಲು ಪ್ರತಿ ಡಿಸೆಂಬರ್ ೧ರಂದು ಆಚರಿಸಲಾಗುತ್ತದೆ. ಜಿಕ್ಕಬಳ್ಳಾಪುರ ಜಿಲ್ಲೆ ಏಡ್ಸ್ ಮುಕ್ತ ಜಿಲ್ಲೆಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಏಡ್ಸ್ ತಡೆಯಲು ಅರಿವು ಮೂಡಿಸುವ ಜಾಥಾ ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಿಂದ ಸಾಗಿ ರಸ್ತೆಗಳಲ್ಲಿ ಬ್ಯಾನರ್ ಪ್ರದರ್ಶಿಸಿಸುವ ಮೂಲಕ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಳಿ ಮುಕ್ತಾಯವಾಯಿತು. ಜಿಲ್ಲಾ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ್ ಮಾತನಾಡಿ, ಮಾರಕ ರೋಗಗಳಲ್ಲಿ ಜಗತ್ತನ್ನ ಕಾಡಿದ್ದ ಏಡ್ಸ್ ರೋಗವೂ ಒಂದು. ಇದೊಂದು ರಕ್ತದಲ್ಲಿ ಹರಡುವ ಕಾಯಿಲೆಯಾಗಿದೆ. ಈ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಏಡ್ಸ್ ದಿನ ಮೊದಲ ಬಾರಿಗೆ ೧೯೮೮ರಲ್ಲಿ ಆಚರಿಸಲಾಯಿತು ಎಂದರು.

ಈ ವೇಳೆ 2024ರ ವಿಶ್ವ ಏಡ್ಸ್ ದಿನದ ಘೋಷವಾಕ್ಯವಾದ ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ ನನ್ನ ಆರೋಗ್ಯ,ನನ್ನ ಹಕ್ಕು ಎಂಬ ಪ್ರತಿ ವಿಧಿ ಬೋಧಿಸಿ, ಏಡ್ಸ್ ವಿರುದ್ಧ ಜಾಗೃತಿ ಮೂಡಿಸುವಲ್ಲಿ ಸಾಭನೆಗೈದ ವ್ಯಕ್ತಿಗಳಿಗೆ ಸನ್ಮಾನಿಸಲಾಯಿತು. ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಿಲ್ಪ ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಡಿ.ಟಿ ಉಮಾ, ತಾಲ್ಲೂಕು ವೈದ್ಯಾಧಿಕಾರಿ ಮಂಜುಳ ಇದ್ದರು.

About The Author

Leave a Reply

Your email address will not be published. Required fields are marked *