ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 24, 2024

Ctv News Kannada

Chikkaballapura

ಜಿಲ್ಲಾಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ವಾಪಸ್

1 min read

ಜಿಲ್ಲಾಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ವಾಪಸ್

ಗುಡಿಬಂಡೆ ತಾಲೂಕಿನಲ್ಲಿ ನಡೆಯುತ್ತಿದ್ದ ಅನಿರ್ಧಿಷ್ಟ ಧರಣಿ

ರಸ್ತೆ ಅಗಲೀಕರಣದಿಂದ ಮನೆ ಕಳೆದುಕೊಂಡವರಿ0ದ ಹೋರಾಟ

ಗುಡಿಬಂಡೆ ತಾಲೂಕಿನ ಕಡೇಹಳ್ಳಿ ರಸ್ತೆ ಅಗಲೀಕರಣದ ವೇಳೆ ಮನೆಗಳನ್ನ ಕಳೆದುಕೊಂಡವರಿ0ದ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಭರಣಿ ನಡೆಸುತ್ತಿದ್ದು, ಜಿಲ್ಲಾಧಿಕಾರಿಗಳ ಭರವಸೆ ನಂತರ ಪ್ರತಿ ಭಟನಾಕಾರರು ಭರಣಿ ಕೈಬಿಟ್ಟಿದ್ದಾರೆ.

ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದ ಸರ್ವೆ ನಂಬರ್ 131 ರಲ್ಲಿ 2 ಎಕರೆ 15 ಗುಂಟೆ ಜಮೀನಿನಲ್ಲಿ ಮನೆಗಳನ್ನ ಕಳೆದುಕೊಂಡವರಿಗೆ ಬದಲಿ ನಿವೇಶನ ನೀಡಲು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದರು. ಆದರೆ ಆ ಜಾಗದಲ್ಲಿ ಸ್ಥಳೀಯ ವ್ಯಕ್ತಿಯೊಬ್ಬ ಬಗರ್ ಹುಕುಂ ಅಕ್ರಮ ಸಕ್ರಮಕ್ಕಾಗಿ ನಮೂನೆ 57 ರಲ್ಲಿ ಜಮೀನು ಮಂಜೂರಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬ0ಧ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರ0ತೆ. ಜೊತೆಗೆ ಈ ಜಾಗವನ್ನು ಯಾರೂ ಅತಿಕ್ರಮಣ ಮಾಡಬಾರದೆಂದು ನಾಮಲಕ ಕೂಡ ಸಹ ಅಳವಡಿಸಿದ್ದಾರೆ.

ಓಬನ್ನಗಾರಹಳ್ಳಿಯ ಆ ವ್ಯಕ್ತಿ ಆ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾಗಿದ್ದಾರೆ. ಇದರಿಂದ ಕಡೇಹಳ್ಳಿ ಗ್ರಾಮಸ್ಥರು ನಿವೇಶನ ನೀಡಲು ಮಂಜೂರು ಮಾಡಿದ ಜಮೀನಿನಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದರು. ನಿವೇಶನ ನೀಡುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಭರಣಿ ವಿಷಯ ಅರಿತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾಪಂಚಾಯಿತಿ ಸಿಇಒ ಪ್ರಕಾಶ್ ಜಿ ನಿಟ್ಟಾಲಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ, ಭರಣಿ ನಿರತರೊಂದಿಗೆ ಚರ್ಚೆ ನಡೆಸಿ, ಬದಲಿ ನಿವೆಶನಗಳನ್ನ ಕೊಡಿಸುವ ಭರವಸೆ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *