ಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಧರಣಿ
1 min readಎರಡನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಧರಣಿ
ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ
ಕೆಲಸದ ಒತ್ತಡ ಕಡಿಮೆ ಮಾಡಲು ಒತ್ತಾಯ
ಕೆಲಸದ ಒತ್ತಡ ಹೆಚ್ಚಾಗುತ್ತಿರುವುದನ್ನ ಕಡಿಮೆ ಮಾಡುವುದು, ಅಗತ್ಯ ಸೌಲಭ್ಯಗಳ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿ¯್ಲÁಡಳಿತ ಭವನದ ಎದುರು ಕಂದಾಯ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ೨ನೇ ದಿನಕ್ಕೆ ಕಾಲಿಟ್ಟಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಮುಷ್ಕರ ಕೈಗೊಂಡಿರುವ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ಮೇಲೆ ನಿರಂತರವಾಗಿ ಸರ್ಕಾರ ಕೆಲಸದ ಒತ್ತಡ ಹೇರುತ್ತಿರುವುದರಿಂದ ಒತ್ತಡ ಹೆಚ್ಚಾಗಿ ಅಧಿಕಾರಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಮೂಲ ಸೌಕರ್ಯಗಳ ಕಲ್ಪಿಸದೇ ಕೆಲಸದ ಒತ್ತಡ ಹೇರುತ್ತಿದ್ದರೆ ಕೆಲಸ ಮಾಡುವುದಾದರೂ ಹೇಗೆ. ಎಲ್ಲವೂ ಸ್ವಂತ ಹಣದಲ್ಲೆ ಖರ್ಚು ಮಾಡಿಕೊಂಡು ಸಾರ್ವಜನಿಕರ ಕೆಲಸ ಮಾಡಬೇಕಾಗಿದೆ. ಅಗತ್ಯ ಸೌಲಭ್ಯಗಳಿಲ್ಲದೇ ನಿರಂತರವಾಗಿ ಕೆಲಸ ಮಾಡಿದರೆ ಹೇಗೆ, ಜೊತೆಗೆ ರಜಾ ದಿನಗಳಲ್ಲೂ ಕೆಲಸದ ಒತ್ತಡ ಹೇರುತ್ತಿರುವುದರಿಂದ ಅಧಿಕಾರಿಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಅಲ್ಲದೇ ಕೌಟುಂಬಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆಂದು ಅಧಿಕಾರಿಗಳು ದೂರಿದರು.
ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಸರ್ಕಾರ ಕಂದಾಯ ಅಧಿಕಾರಿಗಳ ಮೇಲೆ ಒತ್ತಡ ಹೇರುವುದನ್ನು ಕಡಿಮೆ ಮಾಡುವುದರ ಜೊತೆಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.
ಲ್ಯಾಪ್ಟಾಪ್ ಕಂಪ್ಯೂಟರ್ ಸೌಲಭ್ಯವಿಲ್ಲ, ಕೂರಲು ಚೇರ್ ಇಲ್ಲ, ಸರಿಯಾದ ವ್ಯವಸ್ಥೆ ಇಲ್ಲ, ಹಾಗಾಗಿ ನಾವು ಜಿಲ್ಲೆಧಿಕಾರಿಗಳ ಕಚೇರಿ ಮುಂದೆ ಧರಣಿಗೆ ಕೂಳಿದುಕೊಂಡಿದ್ದೇವೆ ಎಂದು ಅಳಲು ತೋಡಿಕೊಂಡರು.
ಒಟ್ಟಾರೆಯಾಗಿ ಮೂಲ ಸೌಕರ್ಯಗಳಿಗೆ ಹಾಗೂ ಬೇಡಿಕೆಗಳು ಸಿಗೋವರೆಗೂ ಈ ಧರಣಿ ನಿಲ್ಲೋದ್ದಿಲ್ಲ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದರು.