ಉಚಿತ ಜಾನುವಾರು ಮೇವು ವಿತರಣೆ

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ದಂಡು

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಶ್ರೀನಿವಾಸಪುರದಲ್ಲಿ ಪ್ರತಿಭಟನೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಖಂಡನೆ

December 23, 2024

Ctv News Kannada

Chikkaballapura

ನಾನು ಧರಿಸಿದ್ದ ಹುಲಿ ಉಗುರು ಪೆಂಡೆಂಟ್ ಕೃತಕವಾದದ್ದು: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

1 min read

ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ನಾನು ಧರಿಸಿದ್ದ ಹುಲಿ ಉಗುರು…

ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಜೆಡಿಎಸ್ ಯುವ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು, ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿದ್ದಾರೆ.

ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಟ್ವೀಟ್ ಮಾಡಿದ್ದಾರೆ.

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನಯ್ ಗುರೂಜಿ, ನಟ ಜಗ್ಗೇಶ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ.

About The Author

Leave a Reply

Your email address will not be published. Required fields are marked *