ತುರುವೇಕೆರೆ ಶಾಸಕ ಕೃಷ್ಣಪ್ಪ ಮಾಗಡಿ ಶಾಸಕ ಬಾಲಕೃಷ್ಣಗೆ ಸವಾಲು
1 min readಗುಂಡು ಹಾರಿಸಿದರೂ ರೈತರ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ
ತುರುವೇಕೆರೆ ಶಾಸಕ ಕೃಷ್ಣಪ್ಪ ಮಾಗಡಿ ಶಾಸಕ ಬಾಲಕೃಷ್ಣಗೆ ಸವಾಲು
ಎಕ್ಸ್ಪ್ರೆಸ್ ಕೆನಾಲ್ ವಿರೋಧಿಸಿ ಜೂ.25ಕ್ಕೆ ತುಮಕೂರು ಜಿಲ್ಲೆ ಬಂದ್
ಬoದ್‌ಗೆ ಸಹಕರಿಸಲು ಸಾರ್ವಜನಿಕರಿಗೆ ಮನವಿ ಮಾಡಿದ ಶಾಸಕ
ತುರುವೇಕೆರೆ ತಾಲ್ಲೂಕಿಗೆ ನಿಗಧಿಪಡಿಸಿದ ನೀರು ಸಿಗದೇ ಕೇವಲ ಸಣ್ಣಪುಟ್ಟ ಕೆರೆಗಳನ್ನು ತುಂಬಿಸಿಕೊಳ್ಳಲು ಮಾತ್ರ ಸಾಧ್ಯವಾಗಿದ್ದು, ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಹರಿಸಿದರೆ ಜಿಲ್ಲೆಯ ರೈತರ ಪಾಲಿಗೆ ಮರಣ ಶಾಸನವಾಗಲಿದೆ ಎಂದು ರೈತಸಂಘದ ತಾಲ್ಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ ಆತಂಕ ವ್ಯಕ್ತಪಡಿಸಿದರು.
ತುರುವೇಕೆರೆ ಪಟ್ಟಣದ ಎಪಿಎಂಸಿ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೈತಸಂಘದ ತಾಲ್ಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ, ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿಯಿಂದ ಜಿಲ್ಲೆಗೆ ಆಗಿರುವ ಅನ್ಯಾಯ ಹಾಗೂ ರಾಜ್ಯ ಸರ್ಕಾರವನ್ನು ಎಚ್ಚರಿಸಲು ಜಿಲ್ಲಾ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತುರುವೇಕೆರೆಯಲ್ಲೂ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ, ವಿವಿಧ ಸಂಘಟನೆಗಳೊoದಿಗೆ ಸಾರ್ವಜನಿಕರು ಹಾಗೂ ರೈತರು 25 ರ ಬೆಳಗ್ಗೆ 6 ಗಂಟೆಯಿoದ ಬಂದ್ ಆಚರಿಸಲಿದ್ದಾರೆ. ತುಮಕೂರು ಜಿಲ್ಲೆಗೆ ಹೇಮಾವತಿ ಗೊರೂರು ಜಲಾಶಯದಿಂದ 24.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಈಗಾಗಲೇ ಹಂಚಿಕೆ ಮಾಡಿರುವ ನೀರು ಪ್ರತಿ ವರ್ಷ ಗೊರೂರು ಜಲಾಶಯದಿಂದ ಪೂರ್ಣ ಪ್ರಮಾಣದಲ್ಲಿ ಹರಿಸದೆ ಜಿಲ್ಲೆಯ ರೈತರು, ಜನ, ಜಾನುವಾರು ಮತ್ತು ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ಆರೋಪಿಸಿದರು.
ತುಮಕೂರು ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಗುಬ್ಬಿ ಹಾಗೂ ತುಮಕೂರು ಕುಣಿಗಲ್, ಶಿರಾ ತಾಲೂಕುಗಳಿಗೆ ಕುಡಿಯುವ ನೀರಿಗಾಗಿ ಹೇಮಾವತಿ ನೀರು ಬಳಸಲಾಗುತ್ತಿದೆ. ಈವರೆಗೂ ನಿಗಧಿಪಡಿಸಿದ ನೀರು ಸಿಗದೇ ಯಾವುದೇ ಕೆರೆಗಳಿಗೆ ನೀರು ಬಂದಿಲ್ಲ ಕೇವಲ ಸಣ್ಣಪುಟ್ಟ ಕೆರೆಗಳನ್ನು ತುಂಬಿಸಿಕೊಳ್ಳಲು ಮಾತ್ರ ಸಾಧ್ಯವಾಗಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ ಪರಿಸ್ಥಿತಿ ಹೀಗಿದ್ದರೆ ಕಾಂಗ್ರೆಸ್ ಸರ್ಕಾರದ ಆದೇಶ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕೆರೆಗಳಿಗೆ ಸುಮಾರು 843 ಎಮ್ ಸಿಎಫ್ಟಿ ನೀರನ್ನು ಹರಿಸಿಕೊಳ್ಳಲು ಆದೇಶಿಸಿದೆ. ಕಾಂಗ್ರೆಸ್ ಸರ್ಕಾರದ ಹೊಸ ಆದೇಶ ತುರುವೇಕೆರೆ ತಾಲ್ಲೂಕಿನ ರೈತರ ಪಾಲಿಗೆ ಮರಣ ಶಾಸನವಾಗಲಿದೆ ಎಂದು ಹೇಳಿದರು.
ಗುಬ್ಬಿ ತಾಲೂಕಿನ ರಾಂಪುರದ ಬಳಿ ಇರುವ ಹೇಮಾವತಿ ನಾಲೆಯಿಂದ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭಿಸಿದೆ. ಜಿಲ್ಲೆಗೆ ಕೊಟ್ಟಿರುವ 24.5 ಟಿಎಂಸಿ ನೀರು ಈವರೆಗೆ ಪಡೆಯಲಾಗದೆ ಕೇವಲ 16 ಟಿಎಂಸಿ ನೀರು ಸಿಗುತ್ತಿದೆ. ಇದರಿಂದ ಜಿಲ್ಲೆಯ ಹಾಗೂ ತುರುವೇಕೆರೆ ತಾಲ್ಲೂಕಿನ ಕೆರೆಗಳಿಗೆ ನೀರು ಸಿಕ್ಕಿಲ್ಲ. ಜಿಲ್ಲೆಯ ಪಾಲಿನ ನೀರು ರಾಮನಗರ ಜಿಲ್ಲೆಗೆ ಕೊಟ್ಟರೆ ನಮ್ಮ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಿಕೊಳ್ಳಲು ಆಗುವುದಿಲ್ಲ. ಹಾಗಾಗಿ ಈಗಾಗಲೇ ಇದರ ವಿರುದ್ಧ ಹೋರಾಟ ಪ್ರಾರಂಭಿಸಲಾಗಿದೆ. ತುಮಕೂರು ಜಿಲ್ಲೆ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ ಎಂದರು.
ತುಮಕೂರು ಜಿಲ್ಲೆಯಿಂದ ರಾಮನಗರಕ್ಕೆ ಕೊಂಡೊಯ್ಯಲಿರುವ ಹೇಮಾವತಿ ನೀರಿನ ಎಕ್ಸ್ಪ್ರೆಸ್ ಕೆನಾಲ್ ವಿರೋಧಿಸಿ ನಡೆಸುತ್ತಿರುವ ತುಮಕೂರು ಜಿಲ್ಲೆ ಬಂದ್‌ಗೆ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಜೂನ್ 25ರಂದು ಕರೆ ನೀಡಿದ್ದು, ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ಕೈ ಬಿಡುವವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿದಲ್ಲಿದೆ, ಹೇಮಾವತಿ ನೀರು ತೆಗೆದುಕೊಂಡು ಹೋಗುತ್ತೇವೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ನಮ್ಮ ಜಿಲ್ಲೆಯಲ್ಲಿಯೇ ಕುಡಿಯಲು ಮತ್ತು ಕೃಷಿಗೆ ನೀರಿನ ಕೊರತೆ ಇರುವಾಗ ರಾಮನಗರ ಜಿಲ್ಲೆಗೆ ನೀರು ನೀಡಲು ಸಾಧ್ಯವೇ ಇಲ್ಲ. ಹಾಗಾಗಿ ಎಕ್ಸಪ್ರೆಸ್ ಕೆನಾಲ್ ವಿರೋಧಿಸಿ ಹೋರಾಟ ಹತ್ತಿಕ್ಕಲು ಸಾಧ್ಯವೇ ಇಲ್ಲ. ಹೋರಾಟಗಾರರನ್ನು ಬಂಧಿಸಲಿ, ಗುಂಡು ಹಾರಿಸಿದರೂ ಹೆದರುವ ಪ್ರಮೇಯವೇ ಇಲ್ಲ ಎಂದು ಶಾಸಕರು ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ ಗುಂಡು ಹಾರಿಸಲಿ ಎಂದು ಮಾಗಡಿ ಶಾಸಕರಿಗೆ ಸವಾಲು ಹಾಕಿದರು. ಎಕ್ಸ್ಪ್ರೆಸ್ ಕೆನಾಲ್ ವಿರೋಧಿಸಿ ನಮ್ಮ ಹೋರಾಟ ನಿರಂತರವಾಗಿ ಇರುತ್ತದೆ ಎಂದರು. ಈ ಸಂದರ್ಭದಲ್ಲಿ ರೈತಸಂಘದ ಗೌರವಾಧ್ಯಕ್ಷ ಬಸವರಾಜು, ಉಪಾಧ್ಯಕ್ಷ ಗಂಗಾಧರಯ್ಯ, ಪ್ರಧಾನ ಕಾರ್ಯದರ್ಶಿ ವಿಜಿಕುಮಾರ್, ಆಟೋ ಚಾಲಕರ ಸಂಘದ ಗಂಗಣ್ಣ, ಜಗದೀಶ್, ಉಮೇಶ್, ಕೀರ್ತಿ, ರಾಮಚಂದ್ರ, ಮಂಜಣ್ಣ ಇದ್ದರು.