ಬಾಲಭವನಕ್ಕೆ ಬರುವ ಪ್ರವಾಸಿಗರಿಂದ ಸ್ವಂತ ಖಾತೆಗೆ ಹಣ ವರ್ಗಾವಣೆ; ಇಬ್ಬರು ಸಿಬ್ಬಂದಿ ವಜಾ, ಮತ್ತಿಬ್ಬರು ಅಮಾನತು
1 min readಮಯೂರ ಬಾಲಭವನ(Bal Bhavana)ದಲ್ಲಿ ಹಣಕಾಸು ಅವ್ಯವಹಾರ ಆರೋಪ ಹಿನ್ನೆಲೆ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಿದರೆ, ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಹೌದು, ಮಯೂರ ಬಾಲ ಭವನ ಸಿಬ್ಬಂದಿಗಳು ಇಲ್ಲಿಗೆ ಬರುವ ಪ್ರವಾಸಿಗರಿಂದ.
ಕ್ಯೂ ಆರ್ ಕೋಡ್ ಬಳಸದೇ ವೈಯಕ್ತಿಕ ಖಾತೆಯ ಕ್ಯೂ ಆರ್ ಕೋಡ್ ಬಳಸಿ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. ಹಣ ದುರುಪಯೋಗದ ತಪ್ಪೊಪ್ಪಿಗೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನು ದ್ವಿತೀಯ ದರ್ಜೆ ಸಹಾಯಕ ರಾಮಚಂದ್ರ ಕೆ ಹಾಗೂ ವಾಹನ ಚಾಲಕ ಅಬ್ದುಲ್ ವಾಜಿದ್ ಎಂಬಿಬ್ಬರನ್ನು ಸೇವೆಯಿಂದ ವಜಾಗೊಳಿಸಿದರೆ, ಸಹಾಯಕ ಉಗ್ರಾಣಿಕ ವೆಂಕಟೇಶ್ ಮತ್ತು ಸಹಾಯಕ ಪರೊಚಾರಿಕ ಕೋದಂಡರಾಮ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಇದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಡಿಯಲ್ಲಿ ನಡೆದಿರುವ ದುರುಪಯೋಗ ಆಗಿದ್ದು, ನಾಲ್ವರ ವಿರುದ್ದ ಎಫ್ಐಆರ್ ದಾಖಲಿಸಲು ಸಚಿವ ಎಚ್ಕೆ ಪಾಟೀಲ್ ಸೂಚನೆ ನೀಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಎಸ್ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿತ್ತು. ಈ ಎಲ್ಲ ಘಟನೆಗಳಿಂದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೆ ಒಳಗಾಗಿದ್ದು, ಈ ಹಿನ್ನಲೆ ಬಿಜೆಪಿ ಜೂ.28 ರಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
#ctvnews #ctvNews #ctv
Top News: Latest Trending in India, Buzz, World Trending News, Hot on Social Media, What is Trending in the World, Trending on Social Media.
►Watch LIVE: https://shashwatha.com/player.php?url=https://shashwatha.com/hls/shashwatha/ctvnews.m3u8
►CTV News : https://ctvnewskannada.com/
►Subscribe to Ctv News: https://www.youtube.com/channel/UCHtq26kA5D5anCbPD3HoURw
►Big News Big Update : https://ctvnewskannada.com/
► Download CTV Android App: https://play.google.com/store/apps/details?id=com.ctv.ctvnews
► Like us on Facebook: https://www.facebook.com/ctvnewschikkaballapura
► Follow us on Instagram: https://www.instagram.com/ctvnewschikkaballapura/
► Follow us on Twitter: https://twitter.com/ctvnewscbpura
-news #ctv #ctvnewskannada #ctvchikkaballapura #ctvnewsmedia #ctvlive#ctvnewsupdate #todaynews #latestnewstoday