ಆಶಾ ಕಾರ್ಯಕರ್ತರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ
1 min readಆಶಾ ಕಾರ್ಯಕರ್ತರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ
ಶಾಸನಬದ್ಧ ಸೌಲಭ್ಯ ಒದಗಿಸಲು ಒತ್ತಾಯ
ಆಶಾ ಕಾರ್ಯಕರ್ತೆಯರ ರಾಜ್ಯ ಸಮ್ಮೇಳನ
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಅಲ್ಲಿಯವರೆಗೆ ಕಾರ್ಮಿಕರು ಎಂದು ಪರಿಗಣಿಸಿ ಎಲ್ಲಾ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಶಾಕಾರ್ಯಕರ್ತೆಯರ ರಾಜ್ಯ ಸಮ್ಮೇಳದಲ್ಲಿ ಒತ್ತಾಯಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಇಂದು ಆಶಾ ಕಾರ್ಯಕರ್ತೆಯರ ರಾಜ್ಯ ಸಮ್ಮೇಳನ ಆಯೋಜಿಸಲಾಗಿತ್ತು.
ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಅಲ್ಲಿಯವರೆಗೆ ಕಾರ್ಮಿಕರು ಎಂದು ಪರಿಗಣಿಸಿ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಶಾಕಾರ್ಯಕರ್ತೆಯರ ರಾಜ್ಯ ಸಮ್ಮೇಳದಲ್ಲಿ ಒತ್ತಾಯಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಇಂದು ಆಶಾ ಕಾರ್ಯಕರ್ತೆಯರ ರಾಜ್ಯ ಸಮ್ಮೇಳನ ಆಯೋಜಿಸಲಾಗಿತ್ತು. ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಸೋಮಶೇಖರ್ ಯಾದಗಿರಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿದರು.
ರಾಷ್ಟಿಯ ಆರೋಗ್ಯ ಅಭಿಯಾನದಡಿ ನೇಮಿಸಲ್ಪಟ್ಟ ಆಶಾ ಕಾರ್ಯಕರ್ತೆಯರು ಆರೋಗ್ಯ ಕ್ಷೇತ್ರದ ಅತ್ಯಂತ ಕೆಳ ಹಂತದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾಜಿಕ ಸ್ವಾಸ್ಥಕ್ಕೆ ಅಪಾರ ಕೊಡುಗೆ ನೀಡುತ್ತಿರೆ. ರಾಜ್ಯದಲ್ಲಿ ಸುಮಾರು ೪೨ ಸಾವಿರಕ್ಕೂ ಹೆಚ್ಚು ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಲ್ಲಿ ಬಹುತೇಕರು ವಿಧವೆ, ವಿಚ್ಛೇಧಿತೆ, ಒಬ್ಬೊಂಟಿ ಮಹಿಳೆಯರೇ ಆಗಿದ್ದಾರೆ. ಕೊರೋನಾ ಕಾಲದಲ್ಲಿ ಇವರ ಅನುಪಮ ಸೇವೆ ಗುರುತಿಸಿ ಸರಕಾರ ಕೊರೋನಾ ವಾರಿಯರ್ಸ್ ಎಂದರೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಆರೋಗ್ಯ ನಾಯಕರು ಎಂದು ಶ್ಲಾಘಿಸಿದೆ ಎಂದರು.
ರಾಜ್ಯ ಕಾರ್ಯದರ್ಶಿ ಡಿ, ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಅಲ್ಲಿಯವರೆಗೆ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಬೇಕು, ಸಾಮಾಜಿಕ ಭದ್ರತೆ ಖಾತ್ರಿಪಡಿಸಬೇಕು, ಸಾರ್ವಜನಿಕ ಆರೋಗ್ಯ ಬಲಪಡಿಸಲು ಅಗತ್ಯವಿರುವಷ್ಟು ಅನುದಾನ ಒದಗಿಸಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಮಾಸಿಕ ಕನಿಷ್ಠ 15 ಸಾವಿರ ಪ್ರೋತ್ಸಾಹ ಧನ ನೀಡಬೇಕು, ಮೊಬೈಲ್ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ಮಾಡಿಸಿಕೂಳ್ಳುತ್ತಿರುವುದನ್ನು ಕೈಬಿಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮಾಡಿದರು.
ಈ ವೇಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಸಾರ್ವಜನಿಕರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾದರು.